ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ ಚುನಾವಣೆಗೆ ಹುರಿಯಾಳುಗಳನ್ನು ಘೋಷಣೆ ಮಾಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಗರಾಜ್ ಯಾದವ್ ಹಾಗೂ ಅಬ್ದುಲ್ ಜಬ್ಬರ್ ಗೆ ಟಿಕೆಟ್ ನೀಡಲಾಗಿದೆ.
ಎಐಸಿಸಿಯಿಂದ ಟಿಕೆಟ್ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ವಕ್ತಾರ ನಾಗರಾಜ್ ಯಾದವ್ ಗೆ ಟಿಕೆಟ್ ನೀಡಲಾಗಿದೆ. ಅಲ್ಲದೇ ಅಬ್ದುಲ್ ಜಬ್ಬರ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಲಾಗಿದೆ.



