ಹುಬ್ಬಳ್ಳಿ : ಎಲ್ಲೆಡೆ ಬಿಜೆಪಿ ಪರವಾದ ಪ್ರತಿಕ್ರಿಯೆಯನ್ನು ಗಮನಿಸಿದರೆ ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ಕೂ ಸ್ಥಾನ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬೆಳಗಾವಿ ಹಾಗೂ ಹುಬ್ಬಳ್ಳಿಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ತೆರಳುತ್ತಿದ್ದು, ಇಫ್ಯೂವರೆಗೂ ನಡೆದಿರುವ ಅಭಿಯಾನ ಮತ್ತು ಪ್ರತಿಕ್ರಿಯೆಗಳನ್ನು ಪರಿಗಣಿಸಿದರೆ ಭಾ.ಜ.ಪಕ್ಕೆ ಗೆಲುವು ಖಚಿತ ಎಂಬ ವಿಶ್ವಾಸ ಮೂಡಿರುವುದಾಗಿ ಮುಖ್ಯ ಮಂತ್ರಿಗಳು ತಿಳಿಸಿದರು.




