ವಿಧಾನ ಪರಿಷತ್ ಚುನಾವಣೆ: 7 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

ಬೆಂಗಳೂರು: ರಾಜ್ಯ ವಿಧಾನ ಪರಿಷತ್ತಿನ ಚುನಾವಣೆಗಾಗಿ ಬಿಜೆಪಿಯಿಂದ ನಾಲ್ವರು, ಕಾಂಗ್ರೆಸ್ ನಿಂದ ಇಬ್ಬರು ಹಾಗೂ ಜೆಡಿಎಸ್ ನಿಂದ ಒಬ್ಬರು ಅಭ್ಯರ್ಥಿಗಳು ಸಲ್ಲಿಸಿರುವಂತ ನಾಮಪತ್ರಗಳು ಕ್ರಮ ಬದ್ಧವಾಗಿದೆ.

7 ಸ್ಥಾನಗಳಿಗೆ 7 ಅಭ್ಯರ್ಥಿಗಳಷ್ಟೇ ನಾಮಪತ್ರ ಸಲ್ಲಿಸಿರೋ ಕಾರಣದಿಂದಾಗಿ, ಯಾವುದೇ ಚುನಾವಣೆ ಇಲ್ಲದೇ ಅವಿರೋಧವಾಗಿ ಆಯ್ಕೆಯಾಗೋದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಅಧಿಕೃತವಾಗಿ ಚುನಾವಣಾಧಿಕಾರಿಗಳು ಘೋಷಿಸೋದು ಮಾತ್ರವೇ ಬಾಕಿ ಇದೆ.

ಅಂದಹಾಗೇ ಬಿಜೆಪಿಯಿಂದ ಛಲವಾದಿ ನಾರಾಯಣಸ್ವಾಮಿ, ಕೇಶವ್ ಪ್ರಸಾದ್, ಲಕ್ಷ್ಮಣ್ ಸವದಿ ಮತ್ತು ಹೇಮಲತಾ ನಾಯ್ಕ್ ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ ಪಕ್ಷದಿಂದ ನಾಗರಾಜ್ ಯಾದವ್ ಹಾಗೂ ಅಬ್ದುಲ್ ಜಬ್ಬರ್ ಹುರಿಯಾಳುಗಳಾಗಿದ್ದಾರೆ. ಜೆಡಿಎಸ್ ನಿಂದ ಟಿ.ಎ ಶರವಣ ಕಣದಲ್ಲಿದ್ದಾರೆ. 7 ಸ್ಥಾನಗಳಿಗೆ 7 ಅಭ್ಯರ್ಥಿಗಳಷ್ಟೇ ನಾಮಪತ್ರ ಸಲ್ಲಿಸಿರೋ ಕಾರಣ, ಬಹುತೇಕ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.

About The Author