ಜೋಯಿಡಾದಲ್ಲಿ ಚಿರತೆ ಅಟ್ಟಹಾಸ! ಪಣಸೋಲಿ ಗ್ರಾಮದಲ್ಲಿ ಹೆಚ್ಚಿದ ಆತಂಕ.

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪಣಸೋಲಿ ವಲಯದ ಅವುರ್ಲಿ ದಾಬೆ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿ ವೃದ್ಧೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸುಶೀಲಾ ಶಾಂತರಾಮ್ ದೇಸಾಯಿ (70) ಚಿರತೆ ದಾಳಿಗೆ ಒಳಗಾದ ಮಹಿಳೆಯಾಗಿದ್ದಾರೆ. ಮನೆಯ ಹೊರಭಾಗದಲ್ಲಿ ಇದ್ದ ವೇಳೆ ಚಿರತೆ ಏಕಾಏಕಿ ದಾಳಿ ಮಾಡಿದೆ. ಚಿರತೆ ದಾಳಿಯಿಂದ ವೃದ್ದೆ ತಲೆ ಹಾಗೂ ದೇಹದ ಮೇಲೆ ಗಂಭೀರ ಗಾಯಗಳಾಗಿವೆ.

ಗಾಯಗೊಂಡ ವೃದ್ಧೆಯನ್ನು ತಕ್ಷಣವೇ ಜೋಯಿಡಾ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಜೋಯಿಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಚಿರತೆ ಚಲನವಲನದ ಬಗ್ಗೆ ನಿಗಾ ವಹಿಸಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

About The Author