Dharwad News: ಧಾರವಾಡ: ಧಾರವಾಡ ಮನಸೂರು ಗ್ರಾಮದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷಗೊಂಡಿದ್ದು, ಎಲ್ಲರನ್ನೂ ಭಯಭೀತಗೊಳಿಸಿದೆ. ಕಳೆದ ರಾತ್ರಿ ದೇವಸ್ಥಾನವೊಂದರ ಬಳಿ ಕಟ್ಟಿದ್ದ ಆಕಳು ಕರುಗಳ ಮೇಲೆ ಚಿರತೆ ದಾಳಿ ಮಾಡಿದ್ದು, ಆಕಳು ಕರು ಸಾವನ್ನಪ್ಪಿದೆ.
ಕುಬೇರಪ್ಪ ಮಡಿವಾಳರ ಎಂಬ ರೈತನಿಗೆ ಸೇರಿರುವ ಆಕಳು ಕರು ಸಾವನ್ನಪ್ಪಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಇನ್ನು ಕಳೆದ ಮೂರು ದಿನಗಳ ಹಿಂದಷ್ಟೇ ಇದೇ ಚಿರತೆ, ಧಾರವಾಡ ಕರ್ನಾಟಕ ವಿಶ್ವವಿದ್ಯಾನಿಲಯದ ಹಿಂದೆ ಕಾಣಿಸಿಕೊಂಡಿತ್ತು. ಈಗ ಮತ್ತೇ ಧಾರವಾಡ ಹೊರವಲಯದಲ್ಲಿ ಪ್ರತ್ಯಕ್ಷವಾಗಿದೆ.
ಇನ್ನು ಈ ಗ್ರಾಮಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು, ಗ್ರಾಮಸ್ಥರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸದ್ಯ ಚಿರತೆಗೆ ಬೋನು ಇಡಲು ಅರಣ್ಯ ಇಲಾಖೆ ಸಿಬ್ಬಂದಿ ನಿರ್ಧರಿಸಿದ್ದು, ರಾತ್ರಿ ಎಲ್ಲ ಅರಣ್ಯ ಸಿಬ್ಬಂದಿಗಳು ಗಸ್ತು ತಿರುಗಲು ನಿರ್ಧರಿಸಲಾಗಿದೆ. ಅಲ್ಲದೇ, ಗ್ರಾಮಸ್ಥರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಕಾಂಗ್ರೆಸ್’ನ್ನು ನಾವು ಶಕ್ತಿ ಹೀನಗೊಳಿಸುವ ಅಗತ್ಯವಿಲ್ಲ, ಜನರೇ ಶಕ್ತಿಹೀನಗೊಳಿಸಿದ್ದಾರೆ: ಪ್ರಹ್ಲಾದ್ ಜೋಶಿ
ಮೇಕೆದಾಟು ಯೋಜನೆ ಕುರಿತು ಕಾಂಗ್ರೆಸ್ ದ್ವಂದ್ವ ನೀತಿ ಅನುಸರಿಸುತ್ತಿದೆ: ಬಸವರಾಜ ಬೊಮ್ಮಾಯಿ




