ಮೈಸೂರು ನಗರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಘೋಷಿಸುವಂತೆ ಒತ್ತಾಯಿಸಿ ಇಂದು ಬೈಕ್ ರ್ಯಾಲಿ ಆಯೋಜಿಸಲಾಯಿತು. ಒಕ್ಕಲಿಗ ನೇತೃತ್ವದಲ್ಲಿ ನಡೆದ ಈ ಮೆರವಣಿಗೆ ಒಂಟಿಕೊಪ್ಪಲಿನ ಚಂದ್ರಮೌಳೇಶ್ವರ ದೇಗುಲದಿಂದ ಆರಂಭವಾಗಿ ಅರಮನೆ ಕೋಟೆ ಆಂಜನೇಯಸ್ವಾಮಿ ದೇಗುಲದಲ್ಲಿ ಸಮಾರೋಪಗೊಂಡಿತು.
ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ನಿಶ್ಚಲಾನಂದನಾಥ ಸ್ವಾಮೀಜಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಡಿ.ಕೆ. ಶಿವಕುಮಾರ್ ಅವರ ಪಾತ್ರ ಮಹತ್ವದಾಗಿದೆ ಎಂದು ಹೇಳಿದರು. ಕಾಂಗ್ರೆಸ್ ಬಲವಾಗಿ ಮುಂದುವರಿಯಬೇಕಾದರೆ ಅವರನ್ನು ಮುಖ್ಯಮಂತ್ರಿ ಮಾಡಲು ಕಾಂಗ್ರೆಸ್ ಹೈಕಮಾಂಡ್ ಕ್ರಮ ಕೈಗೊಳ್ಳಬೇಕು, ಇಲ್ಲವಾದಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸ್ವಾಮೀಜಿ ಎಚ್ಚರಿಸಿದರು.
ರ್ಯಾಲಿಯಲ್ಲಿ ಒಕ್ಕಲಿಗ ಸಮುದಾಯದ ಅನೇಕ ಮುಖಂಡರು ಹಾಗೂ ಬೆಂಬಲಿಗರು ಪಾಲ್ಗೊಂಡಿದ್ದರು.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ




