Hubli News: ಹುಬ್ಬಳ್ಳಿ : ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಬಗ್ಗೆ ಹಳ್ಳಿಗಳ ಜನರಿಗೆ ತಲುಪಿಸಬೇಕು. ಅದರ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂಬ ಉದ್ದೇಶದಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ.
ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಘೋಷಣೆ ಮಾಡಿ ಗೌರವ ಸಲ್ಲಿಸಿದೆ. ಸಂವಿಧಾನದಲ್ಲಿ ವಾಕ್ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯ ಒದಗಿಸಲಾಗಿದೆ. ಪ್ರತಿಯೊಬ್ಬರೂ ದೇಶವನ್ನು ಅಭಿವೃದ್ಧಿ ಪಡಿಸುವ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಹೇಳಿದರು.

ಇಂದು ಚನ್ನಮ್ಮ ವೃತ್ತದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತ ಇವುಗಳ ಸಹಯೋಗದಲ್ಲಿ ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಆಯೋಜಿಸಲಾಗಿದ್ದ ಪಂಜಿನ ಮೆರವಣಿಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಲ್ಲರಿಗೂ ಸಮಪಾಲು, ಸಮಬಾಳು ತತ್ವ ಸಂದೇಶ ನೀಡಿದ ಮಹಾನ ಪುರುಷರೆಂದರೆ ಅದು ಡಾ.ಬಿ.ಆರ್.ಅಂಬೇಡ್ಕರ್, ಬಸವಣ್ಣನವರು. ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲರೂ ಒಟ್ಟಾಗಿ ಬಾಳಲು ಈ ಮಹನೀಯರು ಕಾರಣರಾಗಿದ್ದಾರೆ. ಬಸವಣ್ಣನವರು ಅನುಭವ ಮಂಟಪದಲ್ಲಿ ದಯವೇ ಧರ್ಮದ ಮೂಲ ಎಂದು ಹೇಳಿದ್ದರು. ಎಲ್ಲಾ ಸಮಾಜದವರು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಸವಣ್ಣನವರ ಬಗ್ಗೆ ಅರಿಯಬೇಕು. ಡಾ.ಬಿ.ಆರ್.ಅಂಬೇಡ್ಕರ್ ಅವರು ಹಲವಾರು ಕಷ್ಟಗಳ ನಡುವೆ ವಿವಿಧ ದೇಶಗಳ ಸಂವಿಧಾನ ಅಧ್ಯಯನ ಮಾಡಿ, ಭಾರತದ ಸಂವಿಧಾನವನ್ನು ರಚಿಸಿದರು. ಹೀಗಾಗಿ ಅವರನ್ನು ನಾವು ನೆನೆಯಬೇಕು. ಸಂವಿಧಾನದಿಂದ ಮಹಿಳೆಯರಿಗೆ ಹಲವಾರು ಸವಲತ್ತುಗಳು ದೊರೆಯುತ್ತಿವೆ. ಬಡವರ, ದೀನ ದಲಿತರ ಜೀವನ ಸುಧಾರಣೆ ಹಾಗೂ ಅವರ ಆರ್ಥಿಕ ಸ್ಥಿತಿಗತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಸರ್ಕಾರ ರೂ.58 ಸಾವಿರ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗಿಸಲಾಗಿದೆ ಎಂದರು.
ಜಿಲ್ಲಾಧಿಕಾರಿಗಳಾದ ದಿವ್ಯಪ್ರಭು ಜಿ.ಆರ್.ಜೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆಯರಾದ ರೇಣುಕಾ ಸುಕುಮಾರ್, ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ, ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರಾದ ಅಲ್ಲಾಭಕ್ಷ, ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಪ್ರಕಾಶ ಹೊಳೆಪ್ಪಗೋಳ, ಅಪರ ತಹಶೀಲ್ದಾರರಾದ ಜಿ.ವಿ.ಪಾಟೀಲ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿಯರಾದ ಸಿ.ಆರ್.ಅಂಬಿಗೇರ, ವಿವಿಧ ಇಲಾಖೆಗಳ ಅಧಿಕಾರಿಗಳು, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರು, ಸಿಬ್ಬಂದಿ, ಪೌರ ಕಾರ್ಮಿಕರು, ನಿಲಯ ಪಾಲಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಯುಗಾದಿ ನಂತರ ರಾಜ್ಯದಲ್ಲಿ ಒಳ್ಳೆ ಬೆಳೆ-ಮಳೆ, ಧಾರ್ಮಿಕ ಮುಖಂಡನ ಸಾವಾಗಲಿದೆ: ಕೋಡಿಶ್ರೀ ಸ್ಫೋಟಕ ಭವಿಷ್ಯ
ವಿದ್ಯಾರ್ಥಿನಿಯರ ರೀಲ್ಸ್‌ಗೆ ಕಾಮೆಂಟ್ ಮಾಡಿ ಅಚ್ಚರಿ ಮೂಡಿಸಿದ ನಟ ವಿಜಯ್ ದೇವರಕೊಂಡ
ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪತ್ನಿ ರಿವಾಬಾಗೆ ಅರ್ಪಿಸಿದ ರವೀಂದ್ರ ಜಡೇಜಾ..



