Wednesday, January 22, 2025

Latest Posts

ಮೋದಿ, ನಿರ್ಮಲಾ ಸೀತಾರಾಮನ್, ಕುಮಾರಸ್ವಾಮಿ ಇವರೆಲ್ಲರೂ ರಾಜೀನಾಮೆ ನೀಡಲಿ: ಸಿಎಂ ಸಿದ್ದರಾಮಯ್ಯ

- Advertisement -

Political News: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿಬಂದಿದ್ದು, ಲೋಕಾಾಯುಕ್ತ ಎಫ್‌ಐಆರ್ ದಾಖಲು ಮಾಡಿದೆ.

ಎ1 ಆರೋಪಿಯಾಗಿ ಸಿಎಂ ಸಿದ್ದರಾಮಯ್ಯ, ಎ2 ಆರೋಪಿಯಾಗಿ ಸಿಎಂ ಪತ್ನಿ ಪಾರ್ವತಿ, ಎ3 ಆರೋಪಿಯಾಗಿ ಮೈದುನ ಮಲ್ಲಿಕಾರ್ಜುನ್, ಎ4 ಆರೋಪಿಯಾಗಿ ಜಮೀನು ಮಾರಾಟ ಮಾಡಿದ್ದ ದೇವರಾಜು ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಜೀವನದಲ್ಲೇ ಮೊದಲ ಬಾರಿ ತಮ್ಮ ವಿರುದ್ಧ ಎಫ್‌ಐಆರ್ ದಾಖಲಾದ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ಚುನಾವಣಾ ಬಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆ ಎಫ್ ಐ ಆರ್ ದಾಖಲಿಸುವಂತೆ ಆದೇಶ ಹೊರಬಿದ್ದಿದೆ. ಇವರ ರಾಜೀನಾಮೆಗೆ ಬಿಜೆಪಿ ನಾಯಕರು ಯಾವಾಗ ಪ್ರತಿಭಟನೆ, ಪಾದಯಾತ್ರೆ ಮಾಡುತ್ತಾರೆ? ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ಅವರೂ ರಾಜೀನಾಮೆ ನೀಡಬೇಕಾಗುತ್ತದೆ. ಜಾಮೀನಿನ ಮೇಲಿರುವ ಕುಮಾರಸ್ವಾಮಿಯವರು ರಾಜೀನಾಮೆ ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಅಲ್ಲದೇ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದ ಸಿಎಂ ಕೇಂದ್ರ ಬಿಜೆಪಿ ಸರ್ಕಾರ ನಮ್ಮ ವಿರುದ್ಧ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ನಾನು ಯಾವ ತಪ್ಪು ಮಾಡಿಲ್ಲವಾದ್ದರಿಂದ ರಾಜೀನಾಮೆ ನೀಡುವ ಅಗತ್ಯವಿಲ್ಲ. ಜಾಮೀನಿನ ಮೇಲಿರುವ ಕುಮಾರಸ್ವಾಮಿಯವರು ರಾಜೀನಾಮೆ ನೀಡಿದ್ದಾರೆಯೇ? ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಪ್ರತಿಪಕ್ಷಗಳು ಮಾಡುತ್ತಿವೆ ಎಂದು ಆರೋಪಿಸಿದ್ದರು.

- Advertisement -

Latest Posts

Don't Miss