Political News: ನಿನ್ನೆ ತಾನೇ ಆರೋಗ್ಯ ಸಚಿವರು ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರು ಮತ್ತು ಇತರೇ ಆರೋಗ್ಯ ಸಮಸ್ಯೆಗಳಿದ್ದವರು ಮಾಸ್ಕ್ ಧರಿಸಿ ಓಡಾಡಬೇಕು ಎಂದು ಹೇಳಿದ್ದರು. ಅಲ್ಲದೇ, ಶೀಘ್ರದಲ್ಲೇ ರಾಜ್ಯ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸುತ್ತದೆ ಎಂದು ಹೇಳಿದ್ದರು. ಇದೀಗ ರಾಜ್ಯ ಸರ್ಕಾರ, ಕೆಲವು ಕೋವಿಡ್ ಮಾರ್ಗ ಸೂಚಿಗಳನ್ನು ಹೊರಡಿಸಿದೆ.
1. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ಗರ್ಭಿಣಿ ಮತ್ತು ಬಾಣಂತಿಯರು ಮನೆಯಿಂದ ಹೊರಹೋಗುವಾಗ, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
2. ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಸಮಸ್ಯೆ ಕಂಡು ಬಂದಲ್ಲಿ, ತಕ್ಷಣ ವೈದ್ಯರನ್ನು ಸಂಪರ್ಕಿಸಿ.
3. ವೈಯಕ್ತಿಕ ಸ್ವಚ್ಛತೆಯ ಕಡೆಗೆ ಗಮನ ನೀಡಿ.
4. ಆರೋಗ್ಯ ಸಮಸ್ಯೆ ಕಂಡುಬಂದಲ್ಲಿ ಜನಸಂದಣಿ ಪ್ರದೇಶದಿಂದ ದೂರವಿರಿ.
5. ಅಂತರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಿ.
ಇವಿಷ್ಟು ರಾಜ್ಯ ಸರ್ಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಯಾಗಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಜಗತ್ತಿನಾದ್ಯಂತ ಕೊರೊನಾ ಮತ್ತೆ ಉಲ್ಬಣಿಸುತ್ತಿದೆ. ರಾಜ್ಯದಲ್ಲಿ ಕೊವಿಡ್ -19 ವೈರಸ್ ಹರಡದಂತೆ ತಡೆಗಟ್ಟಲು ನಮ್ಮ ಸರ್ಕಾರವು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದೆ. ನಮ್ಮ ಪ್ರಯತ್ನ ಫಲನೀಡಬೇಕಾದರೆ ಸಾರ್ವಜನಿಕರ ಸಹಕಾರವೂ ಅತಿ ಮುಖ್ಯ. ಜನರ ಆರೋಗ್ಯದ ದೃಷ್ಟಿಯಿಂದ ನಾವು ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದೇವೆ. ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ. ನಾವು ನೀವು ಜೊತೆಗೂಡಿ ಕೊರೊನಾ ಸಾಂಕ್ರಾಮಿಕವನ್ನು ಹಿಮ್ಮೆಟ್ಟಿಸೋಣ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಇನ್ನು ಡಿಸಿಎಂ ಡಿಕೆಶಿ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ದೇಶಾದ್ಯಂತ ಕೋವಿಡ್-19 ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ರಾಜ್ಯದಲ್ಲಿ ಈ ಸೋಂಕು ಹರಡದಂತೆ ತಡೆಯಲು ನಮ್ಮ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ. ರಾಜ್ಯದ ಜನತೆ ತಪ್ಪದೇ ಈ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ವಿನಂತಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಜಗತ್ತಿನಾದ್ಯಂತ ಕೊರೊನಾ ಮತ್ತೆ ಉಲ್ಬಣಿಸುತ್ತಿದೆ. ರಾಜ್ಯದಲ್ಲಿ ಕೊವಿಡ್ -19 ವೈರಸ್ ಹರಡದಂತೆ ತಡೆಗಟ್ಟಲು ನಮ್ಮ ಸರ್ಕಾರವು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದೆ. ನಮ್ಮ ಪ್ರಯತ್ನ ಫಲನೀಡಬೇಕಾದರೆ ಸಾರ್ವಜನಿಕರ ಸಹಕಾರವೂ ಅತಿ ಮುಖ್ಯ.
ಜನರ ಆರೋಗ್ಯದ ದೃಷ್ಟಿಯಿಂದ ನಾವು ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದೇವೆ. ಅವುಗಳನ್ನು… pic.twitter.com/Yy3WX0vfyN
— Siddaramaiah (@siddaramaiah) December 19, 2023
ದೇಶಾದ್ಯಂತ ಕೋವಿಡ್-19 ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ರಾಜ್ಯದಲ್ಲಿ ಈ ಸೋಂಕು ಹರಡದಂತೆ ತಡೆಯಲು ನಮ್ಮ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ. ರಾಜ್ಯದ ಜನತೆ ತಪ್ಪದೇ ಈ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ವಿನಂತಿಸುತ್ತೇನೆ.#COVID19 #Coronavirus pic.twitter.com/MPx3hHzxiS
— DK Shivakumar (@DKShivakumar) December 19, 2023
ಜಗದೀಶ್ ಶೆಟ್ಟರ್ ಲೋಕಸಭಾ ಅಭ್ಯರ್ಥಿ ಆಗಬೇಕು, ನನ್ನಿಂದ ಮುಕ್ತ ಆಹ್ವಾನ: ಶಾಸಕ ಮಹೇಶ್ ಟೆಂಗಿನಕಾಯಿ
19 ಮೊರಾರ್ಜಿ ದೇಸಾಯಿ ವಸತಿ ಶಾಲೆ, 50 ಮೆಟ್ರಿಕ್ ನಂತರದ ಹಾಸ್ಟೆಲ್ ನಿರ್ಮಾಣಕ್ಕೆ 675 ಕೋಟಿ ರೂ. ಅನುದಾನಕ್ಕೆ ಮನವಿ
‘ರಾಜ್ಯದಲ್ಲಿ ಸರಕಾರ ಬಂದು ಆರು ತಿಂಗಳು ಆದರು ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ’




