Tuesday, April 15, 2025

Latest Posts

ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ. ದೇಶಕ್ಕಾಗಿ, ಮೋದಿಗಾಗಿ: ಸಂಸದ ಪ್ರತಾಪ್ ಸಿಂಹ

- Advertisement -

Political News: ಬಿಜೆಪಿ ಲೋಕಸಭೆ ಸಮರಕ್ಕೆ ಎರಡನೇ ಪಟ್ಟಿ ರಿಲೀಸ್ ಮಾಡಿದೆ. ಕರ್ನಾಟಕದ ಮೊದಲ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದ್ದು, ಹಲವು ಹಾಲಿ ಸಂಸದರಿಗೆ ಶಾಕ್ ಕೊಟ್ಟಿದೆ. ಈ ಮೊದಲೇ ಅಂದಾಜಿಸಿದಂತೆ, ಪ್ರತಾಪ್ ಸಿಂಹ ಅವರಿಗೆ ಕೊಡಗು- ಮೈಸೂರು ಕ್ಷೇತ್ರದ ಲೋಕಸಭೆ ಚುನಾವಣಾ ಟಿಕೇಟ್ ಕೈ ತಪ್ಪಿದೆ. ಯದುವೀರ್ ಒಡೆಯರ್‌ಗೆ ಟಿಕೇಟ್ ಸಿಕ್ಕಿದ್ದು, Congratulations to Maharaja Sri. Yaduveer. ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ. ದೇಶಕ್ಕಾಗಿ, ಮೋದಿಗಾಗಿ ಎಂದು ಪ್ರತಾಪ್ ಸಿಂಹ ಟ್ವೀಟ್ ಮಾಡಿ ಶುಭಕೋರಿದ್ದಾರೆ. 

ಇನ್ನು ಬಿಜೆಪಿ ಪಟ್ಟಿ ರಿಲೀಸ್ ಮಾಡುವ ಮುನ್ನವೇ ಈ ಬಗ್ಗೆ ಮಾತನಾಡಿದ ಪ್ರತಾಪ್ ಸಿಂಹ, ನಾನು ಜನಸಂಘದ ದೀಪದ ಗುರುತಿನಲ್ಲಿ ಗೆದ್ದು ಪಂಚಾಯಿತಿ ಛೇರ್ಮನ್ ಆದ ವ್ಯಕ್ತಿಯ ಮಗ, ನಾನು ಸಾಯುವವರೆಗೂ ಮೋದಿ ಭಕ್ತ ಎಂದು ಪ್ರತಾಪ್ ಹೇಳಿದ್ದಾರೆ. ಅಲ್ಲದೇ, ನನ್ನನ್ನು ಏನೇ ಮಾಡ್ತೀರಿ ಅಂದ್ರು ಕೂಡ ನಾನು ಹೊರಗಡೆ ಹೋಗುವುದಿಲ್ಲ. ನಾನು ಈ ಪಕ್ಷದ ಕಟ್ಟಾಳು ಎಂದಿದ್ದರು.

ಇನ್ನೊಂದೆಡೆ ಸಂಸದ ಡಿ.ವಿ.ಸದಾನಂದಗೌಡರಿಗೆ ಬೆಂಗಳೂರು ಉತ್ತರ ಕ್ಷೇತ್ರದ ಟಿಕೇಟ್ ಕೈ ತಪ್ಪಿದ್ದು, ಶೋಭಾ ಕರಂದ್ಲಾಜೆಗೆ ಈ ಕ್ಷೇತ್ರದ ಟಿಕೇಟ್ ಸಿಕ್ಕಿದೆ. ಹೀಗಾಗಿ ಸದಾನಂದಗೌಡರು ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆಂದು ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿರುವ ಸದಾನಂದಗೌಡ, ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದಾಗಿ ಕೆಲವರು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದುದು. ಹಾರಿಕೆ ಸುದ್ದಿಯನ್ನು ಹಬ್ಬುವವರು ದೇಶದ್ರೋಹಿಗಳು ಎಂದಿದ್ದಾರೆ.

ಇನ್ನು ಟಿಕೇಟ್ ಕೈ ತಪ್ಪಿದ್ದಕ್ಕೆ, ಬೇಸರ ವ್ಯಕ್ತಪಡಿಸದ ನಳೀನ್ ಕುಮಾರ್ ಕಟೀಲ್, ಭಾರತೀಯ ಜನತಾ ಪಾರ್ಟಿಯ ದೇವದುರ್ಲಭ ಕಾರ್ಯಕರ್ತರಿಗೆ, ಮುಖಂಡರಿಗೆ ನಮಸ್ಕಾರಗಳು. ಸಾಮಾನ್ಯ ಕಾರ್ಯಕರ್ತನಾದ ನನಗೆ ಪಕ್ಷದ ಹಿರಿಯರು 15 ವರ್ಷಗಳ ಕಾಲ ಸಂಸದನಾಗಿ, ಅದರೊಂದಿಗೆ 4 ವರ್ಷ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ನೀಡಿದ್ದಾರೆ. ಈ ಅವಧಿಯಲ್ಲಿ ಪಕ್ಷದ ಅಪೇಕ್ಷೆಯಂತೆ ಕೆಲಸ ಮಾಡಿದ ತೃಪ್ತಿ ಇದೆ. ಈ ಉಸಿರು ಇರುವ ತನಕ ಪಕ್ಷ ಮತ್ತು ರಾಷ್ಟ್ರಕ್ಕಾಗಿ ನನ್ನ ಸೇವೆ ನಿರಂತರವಾಗಿರಲಿದೆ ಎಂದಿದ್ದಾರೆ.

ಭಾರತೀಯ ಜನತಾ ಪಾರ್ಟಿಯಿಂದ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅತ್ಯಧಿಕ ಮತಗಳ‌ ಅಂತರದಿಂದ ನೀವು ವಿಜಯಪತಾಕೆ ಹಾರಿಸುವಂತಾಗಲಿ ಎಂದು ಹಾರೈಸುತ್ತೇನೆ ಎಂದು ನಳೀನ್ ಟ್ವೀಟ್ ಮಾಡಿದ್ದಾರೆ.

ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಸರಳ, ಸಜ್ಜನ ರಾಜಕಾರಣಿ, ವಿಧಾನ ಪರಿಷತ್ ಪ್ರತಿಪಕ್ಷ ಮುಖಂಡರಾದ ಶ್ರೀ ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ಅಭಿನಂದನೆಗಳು. ರಾಜ್ಯ ರಾಜಕಾರಣದಿಂದ ರಾಷ್ಟ್ರರಾಜಕಾರಣದ ನಿಮ್ಮ ಪಯಣ ಯಶಸ್ವಿಯಾಗಲಿ ಎಂದು ಶುಭಹಾರೈಸುತ್ತೇನೆ ಎಂದು ನಳೀನ್ ವಿಶ್ ಮಾಡಿದ್ದಾರೆ.

ಹರಿಯಾಣಾದ ನೂತನ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕಾರ

ಯುವರಾಜರೇ ರಾಜರಾಗಿರಿ ಮಂತ್ರಿಯಾಗಬೇಡಿ: ಯದುವೀರ್ ಒಡೆಯರ್ ಅಭಿಮಾನಿಗಳ ಅಭಿಯಾನ

ಸರಕಾರಿ ಕಾರ್ಯಕ್ರಮಕ್ಕೆ ಬರದಿದ್ದರೆ ಗ್ಯಾರಂಟಿ ಯೋಜನೆ ಬಂದ್‌: ಅಂಗನವಾಡಿ ಕಾರ್ಯಕರ್ತೆಯ ‘ಗ್ಯಾರಂಟಿ’ ಬೆದರಿಕೆ

- Advertisement -

Latest Posts

Don't Miss