‘ಮೋದಿಜಿ ಅವರನ್ನು ಪ್ರಧಾನಿಯನ್ನಾಗಿಸಲು ಕರ್ನಾಟಕದ ಗೆಲುವಿನ ಕಿರೀಟ ಸಮರ್ಪಿಸುವ ಶಪಥ ಮಾಡೋಣ’

Political News: ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು, ವಿಜಯೇಂದ್ರ ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಪಕ್ಷ ಸಂಘಟನೆಗೆ ಚೈತನ್ಯ ತುಂಬಲು, ಬಿಜೆಪಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿದ್ದು, ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿ ರಾಜ್ಯಾಧ್ಯಕ್ಷ ಪಣ ತೊಟ್ಟಿದ್ದಾರೆ.

ಪಕ್ಷ ಸಂಘಟನೆಗೆ ಹೊಸ ಚೈತನ್ಯ ತುಂಬಲು ರಾಜ್ಯ ಬಿಜೆಪಿಗೆ ನೂತನವಾಗಿ ನೇಮಕಗೊಂಡಿರುವ ಪದಾಧಿಕಾರಿಗಳಿಗೆ ಆತ್ಮೀಯ ಅಭಿನಂದನೆಗಳು. ಬರುವ ಲೋಕಸಭಾ ಮಹಾ ಚುನಾವಣೆಯಲ್ಲಿ ಶತಕೋಟಿ ಜನರ ಅಭಿಲಾಷೆ ಹಾಗೂ ಕಾರ್ಯಕರ್ತ ಸಮೂಹದ ಅಪೇಕ್ಷೆಯಂತೆ ನಮ್ಮೆಲ್ಲರ ಸಂಕಲ್ಪದ ಗುರಿ ತಲುಪಲು ವಿರಮಿಸದೇ ಶ್ರಮಿಸೋಣ, ಮತ್ತೆ ನಮ್ಮ ಹೆಮ್ಮೆಯ ನರೇಂದ್ರ ಮೋದಿಜಿ ಅವರನ್ನು ಪ್ರಧಾನಿಯನ್ನಾಗಿಸಲು ಕರ್ನಾಟಕದ ಗೆಲುವಿನ ಕಿರೀಟ ಸಮರ್ಪಿಸುವ ಶಪಥ ಮಾಡೋಣ. ಈ ಕ್ಷಣದಿಂದಲೇ ತಾವೆಲ್ಲರೂ ಕ್ರಿಯಾಶೀಲರಾಗಿ ಜವಾಬ್ದಾರಿ ಪ್ರಾರಂಭಿಸುವಂತೆ ವಿನಂತಿಸುವೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಲೋಕಸಭೆಗೆ ಸ್ಪರ್ಧಿಸಲು ನನಗೆ ವೈಯಕ್ತಿಕವಾಗಿ ಆಸಕ್ತಿ ಇಲ್ಲ – ಸಚಿವ ಸಂತೋಷ್ ಲಾಡ್

ಕಿವಿಗೆ ಪೆಟ್ಟು ಬೀಳುವಷ್ಟು ಕೆಟ್ಟದಾಗಿ ಪತ್ನಿಗೆ ಹೊಡೆದ್ರಾ ವಿವೇಕ್ ಬಿಂದ್ರಾ..?

ಭಜರಂಗ್ ಪುನಿಯಾ ಬೆನ್ನಲ್ಲೇ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ ಕುಸ್ತಿಪಟು ವೀರೇಂದ್ರ ಸಿಂಗ್

About The Author