Banglore News:
ಮನೆಯಲ್ಲಿ ನಾಯಿ ಸಾಕುವ ವಿಚಾರಕ್ಕೆ ನಡೆದಿದ್ದ ಜಗಳ ಆತ್ಮಹತ್ಯೆಯಲ್ಲಿ ಅಂತ್ಯವಾದ ವಿಚಿತ್ರ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ದಿವ್ಯಾ ಹಾಗೂ ಆಕೆಯ ಮಗಳು ಆತ್ಮಹತ್ಯೆ ಮಾಡಿಕೊಂಡವರು. ನಾಯಿ ವಿಚಾರಕ್ಕೆ ಅತ್ತೆ-ಮಾವನ ಜೊತೆ ದಿವ್ಯಾಳಿಗೆ ಜಗಳವಾಗಿದೆ. ಈ ಜಗಳವು ದಿವ್ಯಾ ನೇಣಿಗೆ ಕೊರಳೊಡ್ಡುವ ಮೂಲಕ ಅಂತ್ಯವಾಗಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಿವ್ಯಾ ಮನೆಯಲ್ಲಿ ನಾಯಿ ಸಾಕುತ್ತಿದ್ದರು. ಇತ್ತ ಉಸಿರಾಟ ಸಂಬಂಧದ ಕಾಯಿಲೆಯಿಂದ ದಿವ್ಯಾ ಬಳಲುತ್ತಿದ್ದರು. ಈ ಮಧ್ಯೆ ವೈದ್ಯ ರು ಮನೆಯಲ್ಲಿ ನಾಯಿ ಇದ್ದರೆ ಕಾಯಿಲೆ ವಾಸಿಯಾಗಲ್ಲ ಎಂದಿದ್ದರು. ಹೀಗಾಗಿ ನಾಯಿಯನ್ನ ಯಾರಿಗಾದರೂ ನೀಡಿ ಎಂದು ಅತ್ತೆ-ಮಾವನಿಗೆ ದಿವ್ಯಾ ಹೇಳಿದ್ದರು. ಆದರೆ ನಾಯಿಯನ್ನ ಮನೆಯಿಂದ ಕಳಿಸಲು ಅತ್ತೆ-ಮಾವ ಒಪ್ಪಲಿಲ್ಲ. ಇದೇ ವಿಚಾರಕ್ಕೆ ದಿವ್ಯಾ ಹಾಗೂ ಅತ್ತೆ-ಮಾವನ ನಡುವೆ ಗಲಾಟೆ ನಡೆದಿದೆ. ಇದರಿಂದ ಮನನೊಂದ ದಿವ್ಯಾ ತನ್ನ ಮಗಳ ಜೊತೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ರಾಣಿ ಎಲಿಜಬೆತ್ II ರ ಅಂತ್ಯಕ್ರಿಯೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮರ‍್ಮು ಭಾಗವಹಿಸಲಿದ್ದಾರೆ
“ಕೇಂದ್ರ ಸರ್ಕಾರದ ಹಿಡನ್ ಅಜೆಂಡಾ ವಿರುದ್ದ ನಮ್ಮ ಪ್ರತಿಭಟನೆ” : ಎಚ್.ಡಿ.ಕೆ