Movie News: ಮನದ ಕಡಲು ಸಿನಿಮಾ ಶೂಟಿಂಗ್ ವೇಳೆ ದುರ್ಘಟನೆ ಸಂಭವಿಸಿದ್ದು, ಲೈಟ್ ಮ್ಯಾನ್ ಸಾವನ್ನಪ್ಪಿದ್ದಾನೆ. ಈ ಕಾರಣಕ್ಕೆ ನಿರ್ದೇಶಕ ಯೋಗ್‌ರಾಜ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಈ ದುರಂತ ಸಂಭವಿಸಿದ್ದು, ಕೆಲಸ ಮಾಡುವ ವೇಳೆ, 30 ಅಡಿ ಮೇಲಿದ್ದ ಬಿದ್ದ ಲೈಟ್ ಮ್ಯಾನ್ ಮೋಹನ್ ಕುಮಾರ್ ಬಿದ್ದು ಸಾವನ್ನಪ್ಪಿದ್ದಾರೆ. ಕೆಳಗೆ ಬೀಳುತ್ತಿದ್ದಂತೆ, ಮೋಹನ್ ಕುಮಾರ್ ತಲೆಯಿಂದ ರಕ್ತಸ್ರಾವವಾಗಿದೆ. ತಕ್ಷಣ ಅವರನ್ನು ಗೊರಗುಂಟೆಪಾಳ್ಯದ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ, ಮೋಹನ್ ಕುಮಾರ್ ಸಾವನ್ನಪ್ಪಿದ್ದಾರೆ.
ಹೀಗಾಗಿ ಶೂಟಿಂಗ್ ಮಾಡುವಾಗ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಲಿಲ್ಲವೆಂಬ ಕಾರಣ, ಯೋಗರಾಜ್ ಭಟ್, ನಿರ್ಮಾಪಕ ಈ.ಕೆ.ಕೃಷ್ಣಪ್ಪ, ಮ್ಯಾನೇಜರ್ ಸುರೇಶ್, ಅಸಿಸ್ಟೆಂಟ್ ಮ್ಯಾನೇಜರ್ ಮೋಹನ್ ಮೇಲೆ ಎಫ್‌ಐಆರ್ ದಾಖಲಾಗಿದೆ. ಮಾದನಾಯಕನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.