Tuesday, September 16, 2025

Latest Posts

ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು

- Advertisement -

ರಾಜ್ಯದಲ್ಲಿ ಜಾತಿಗಣತಿ ದಿನ ಹತ್ತಿರವಾಗುತ್ತಿದ್ದಂತೆ, ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಜೋರಾಗಿದೆ. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ, ಮತ್ತೆ ಮುನ್ನೆಲೆಗೆ ಬಂದಿದೆ. ಜಾತಿಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತ ಧರ್ಮ ಎಂದು ಬರೆಸಲು, ಸ್ವಾಮೀಜಿಗಳು ಸೂಚನೆ ನೀಡಿದ್ದಾರೆ.

ಇದೇ ವಿಚಾರವಾಗಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಒಮ್ಮತದ ಅಭಿಪ್ರಾಯಕ್ಕೆ ಬಂದಿದೆ. ಧರ್ಮದ ಕಾಲಂನಲ್ಲಿ ಇತರೆ ಎಂಬ ಆಯ್ಕೆಯಲ್ಲಿ, ಲಿಂಗಾಯತ ಧರ್ಮ ಎಂದು ಬರೆಯಿರಿ. ಹೀಗಂತ ದಾವಣಗೆರೆಯಲ್ಲಿ ನಡೆದ ಬಸವ ಸಂಸ್ಕೃತಿ ಬಹಿರಂಗ ಸಭೆಯಲ್ಲಿ, ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸೂಚಿಸಿದ್ದಾರೆ. ಜೊತೆಗೆ, ಜನಗಣತಿಯ ಅರ್ಜಿಯ ಧರ್ಮದ ಕಾಲಂನಲ್ಲಿ, ಲಿಂಗಾಯತ ಎಂಬುದಾಗಿ ಸೇರ್ಪಡೆ ಮಾಡಲು, ಪ್ರಧಾನಿಯವರನ್ನು ಭೇಟಿಯಾಗಿ ಮನವಿ ಮಾಡುವುದಕ್ಕೂ ನಿರ್ಧರಿಸಿದ್ದಾರೆ.

ಮತ್ತೊಂದೆಡೆ, ಪ್ರತ್ಯೇಕ ಲಿಂಗಾಯತ ಧರ್ಮ ಎನ್ನುತ್ತಿರುವ ಸ್ವಾಮೀಜಿಗಳ ವಿರುದ್ದ, ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ಸ್ವಾಮೀಜಿಗಳು ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆಂದು ಆರೋಪಿಸುತ್ತಿದ್ದಾರೆ.

ಇನ್ನು, ದಿಂಗಾಲೇಶ್ವರ ಶ್ರೀಗಳಿಗೆ ವಚನಾನಂದ ಶ್ರೀ ತಿರುಗೇಟು ಕೊಟ್ಟಿದ್ದಾರೆ. ರಾಜ್ಯದಲ್ಲಿ ಹೆಚ್ಚಾಗಿರುವುದು ಪಂಚಮಸಾಲಿಗಳು. ಹೀಗಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮತ್ತು ಜಾಗತಿಕ ಲಿಂಗಾಯತ ಮಹಾಸಭಾಕ್ಕೂ ಪಂಚಮಸಾಲಿ ಪೀಠಗಳಿಗೂ ಸಂಬಂಧವಿಲ್ಲ ಎಂದಿದ್ದಾರೆ. ಒಟ್ನಲ್ಲಿ, ಜಾತಿಗಣತಿ ದಿನ ಹತ್ತಿರವಾಗುತ್ತಿದ್ದಂತೆ, ಪಂಚಮಸಾಲಿಗಳು V/S ವೀರಶೈವ ಲಿಂಗಾಯತ ಫೈಟ್ ಜೋರಾಗುತ್ತಿದೆ.

- Advertisement -

Latest Posts

Don't Miss