Hubli News: ಸ್ಥಾನಿಕ ವೈದ್ಯರ ಶಿಷ್ಯವೇತನ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಸ್ಥಾನಿಕ ನರ್ಸಿಂಗ್ ವಿದ್ಯಾರ್ಥಿಗಳ ಸರ್ಕಾರದ ಅಣಕು ಶವಯಾತ್ರೆ ಮಾಡುವ ಮೂಲಕ ಪ್ರತಿಭಟಮೆ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಹುಬ್ಬಳ್ಳಿ ಸಂಘದ ನೇತೃತ್ವದಲ್ಲಿ ನಗರದ ಕಿಮ್ಸ್ ಆಸ್ಪತ್ರೆಯಿಂದ ಚೆನ್ನಮ ವೃತದವರೆಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈಗಾಗಲೇ ಈ ವಿಷಯವಾಗಿ ಮುಷ್ಕರ ಆರಂಭಿಸಿ, 5 ದಿನಗಳು ಕಳೆದರೂ ಸರ್ಕಾರದ ವತಿಯಿಂದ ಯಾರೊಬ್ಬರೂ ಮಾತುಕತೆಗೆ ಬಂದಿಲ್ಲ.
ನಮ್ಮ ಹೋರಾಟಕ್ಕೆ ಸ್ಪಂದಿಸುತ್ತಿಲ್ಲ. ತುರ್ತು ವೈದ್ಯಕೀಯ ಸೇವೆಗಳನ್ನು ಹೊರತುಪಡಿಸಿ ಹೊರ ರೋಗಿಗಳ ವಿಭಾಗ ಸೇರಿದಂತೆ ಎಲ್ಲ ವಿಭಾಗಗಳ ಸೇವೆಗಳನ್ನು ಸ್ಥಗಿತಗೊಳಿಸಿದ ಕಿರಿಯ ವೈದ್ಯರು ಹೆಚ್ಚಿನ ಸಂಖ್ಯೆಯಲ್ಲಿ ಮುಷ್ಕರದಲ್ಲಿ ಪಾಲ್ಗೊಂಡಿದ್ದು, ಇದರಿಂದ ಸಾರ್ವಜನಿಕರಿಗೂ ತೊಂದರೆಯಾಗುತ್ತಿದೆ. ಆದರೆ ಸರ್ಕಾರ ನಮ್ಮ ಬೇಡಿಕೆ ಈಡೇರಿಕೆಗೆ ಒತ್ತು ನೀಡುತ್ತಿಲ್ಲ. ಈ ಹಿಂದಿನಿಂದಲೂ ಮನವಿ ಮಾಡುತ್ತಾ ಬರಲಾಗಿದೆ, ಸಿಕ್ಕರುವುದು ಮಾತ್ರ ಭರವಸೆಯಾಗಿದೆ. ಹಾಗಾಗಿ ಈಗ ನಾವು ಮುಷ್ಕರ ಆರಂಭಿಸಿದ್ದೇವೆ, ಈ ಕೂಡಲೇ ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದನೆ ಮಾಡಬೇಕು. ಇಲ್ಲವಾದಲ್ಲಿ ನಮ್ಮ ಈಗಿನ ಹೋರಾಟ ಮತ್ತಷ್ಟು ಉಗ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.




