ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ವೀಕೆಂಡ್ ಕರ್ಪ್ಯೂ ( Weekend Curfew ), ನೈಟ್ ಕರ್ಪ್ಯೂವನ್ನು ( Night Curfew ) ಲೆಕ್ಕಿಸದೇ ಕಾಂಗ್ರೆಸ್ ನಿಂದ ಮೇಕೆದಾಟು ಪಾದಯಾತ್ರೆ ನಡೆಸಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಹೆಚ್ಚಾದ್ರೆ..ಮತ್ತೆ ಕಂಪ್ಲೀಟ್ ಲಾಕ್ ಡೌನ್ ( Lockdown ) ಮಾಡಲಾಗುತ್ತದೆ. ಇದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆಯಾಗಲಿದೆ ಎಂಬುದಾಗಿ ಗೃಹ ಸಚಿವ ಅರಗಜ್ಞಾನೇಂದ್ರ ಅವರು ಮುನ್ಸೂಚನೆ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಸೋಂಕು ಹೆಚ್ಚಳವಾದ್ರೆ ಮತ್ತೆ ಲಾಕ್ ಡೌನ್ ಮಾಡ್ಬೇಕಾಗುತ್ತೆ. ತಿಂಗಳುಗಟ್ಟಲೇ ಲಾಕ್ ಡೌನ್ ಮಾಡ್ಬೇಕಾಗುತ್ತೆ. ಮತ್ತೆ ಲಾಕ್ ಡೌನ್ ಆದ್ರೇ ಅದಕ್ಕೆ ಕಾಂಗ್ರೆಸ್ ಹೊಣೆಯಾಗಲಿದೆ. ಕೊರೋನಾ ನಿಯಮ ಉಲ್ಲಂಘಿಸಿ ಪಾದಯಾತ್ರೆ ನಡೆಸುತ್ತಿರುವಂತ ಕಾಂಗ್ರೆಸ್ ಮುಖಂಡರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರೇನು ಅಸಾಹಯಕರಲ್ಲ ಎಂದು ತಿಳಿಸಿದರು.