Saturday, July 27, 2024

Latest Posts

ಲೋಕಸಭೆ ಚುನಾವಣೆ ಮತದಾನ: ಭದ್ರತೆಗೆ 4 ಸಾವಿರ ಸಿಬ್ಬಂದಿಗಳ ನಿಯೋಜನೆ

- Advertisement -

Hubli News: ಹುಬ್ಬಳ್ಳಿ: ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಪೋಲಿಸ್ ಇಲಾಖೆಯಿಂದ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಭದ್ರತೆಗೆ 4000 ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಹು-ಧಾ ಪೋಲಿಸ್ ಆಯುಕ್ತೆ ರೇಣುಕಾ ಸುಕುಮಾರ ಹೇಳಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭದ್ರತೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ತಮಿಳುನಾಡಿಯಿಂದ ಹೆಚ್ಚಿನ ಸಿಬ್ಬಂದಿ ಕರೆಸಿಕೊಳ್ಳಲಾಗಿದೆ. ಅದರಂತೆ ಸಿಆರ್’ಪಿಎಫ್, ಕೆಎಸ್ಆರ್’ಪಿ ತುಕಡಿ ಸೇರಿದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬಂದಿದ್ದಾರೆ ಎಂದರು‌.

ಈಗಾಗಲೇ ಸೂಕ್ಷ್ಮ ಮತ್ತು ಸಾಮಾನ್ಯ ಬೂತ್’ಗಳನ್ನು ಗುರುತಿಸಲಾಗಿದೆ. ಸೂಕ್ಷ್ಮ ಬೂತ್’ಗಳಲ್ಲಿ ಇಬ್ಬರು, ಸಾಮಾನ್ಯ ಬೂತ್’ನಲ್ಲಿ ಒಬ್ಬರನ್ನು ನೇಮಕ ಮಾಡಲಾಗಿದೆ. ಈ ಎಲ್ಲ ಪ್ರಕ್ರಿಯೆ ನೋಡಿಕೊಳ್ಳಲು 42 ಸೆಕ್ಟರ್ ಮೊಬೈಲ್ ವಾಹನಗಳನ್ನು ಇರಿಸಲಾಗಿದೆ. ಇದನ್ನು ಪಿಎಸ್ಐ, ಎಎಸ್ಐ ನೇತೃತ್ವದಲ್ಲಿ ಪೆಟ್ರೋಲಿಂಗ್ ಕಾರ್ಯ ನಡೆಯಲಿದೆ. ಇವರ‌ ಮೇಲೆ 11 ಸೂಪರವೈಸರ್ ಮೊಬೈಲ್ ವಾಹನಗಳು ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಕೆಲಸ ಮಾಡಲಿವೆ ಎಂದು ಹೇಳಿದರು.

ಕಾಂಗ್ರೆಸ್ಸಿನವರು ಚುನಾವಣಾ ಸಮಯದಲ್ಲಿ ಕಾಣಿಸಿಕೊಳ್ಳುತ್ತಾರೆ. ಮತ್ತೆ ನಾಪತ್ತೆಯಾಗುತ್ತಾರೆ: ಬಿ.ವೈ.ವಿಜಯೇಂದ್ರ

ಧಾರವಾಡದಲ್ಲಿ ಪಾದಯಾತ್ರೆ ನಡೆಸಿ, ಮತಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ

ಶಿಕ್ಷಕಿ ಶಾಲೆಗೆ ಲೇಟಾಗಿ ಬಂದರೆಂದು ಹಲ್ಲೆ ಮಾಡಿ ಬಟ್ಟೆ ಹರಿದ ಪ್ರಾಂಶುಪಾಲರು

- Advertisement -

Latest Posts

Don't Miss