Sunday, May 26, 2024

Latest Posts

ಲೋಕಸಭೆ ಚುನಾವಣೆ 2024: ಧಾರವಾಡ ಲೋಕಸಭಾ ಕ್ಷೇತ್ರದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ

- Advertisement -

Political News: ಬೆಂಗಳೂರು: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ.

ಹಲವು ದಿನಗಳಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕಿಡಿಕಾರುತ್ತಿರುವ ದಿಂಗಾಲೇಶ್ವರ ಶ್ರೀಗಳು, ಜೋಶಿ ಲಿಂಗಾಯಿತರನ್ನು ತುಳಿಯುತ್ತಿದ್ದಾರೆ. ಅವರ ವಿರುದ್ಧ ನಾವು ಸಮರ ಸಾರುತ್ತೇವೆ. ಚುನಾವಣೆಗೆ ಸ್ಪರ್ಧಿಸುತ್ತೇವೆ ಎಂದಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಮಠಾಧೀಪತಿಗಳು ರಾಜಕಾರಣಕ್ಕೆ ಬರಬಾರದು ಎಂದು ಜೋಶಿ ಅಭಿಮಾನಿಗಳು ಹೇಳುತ್ತಿದ್ದಾರೆ. ಅವರು ಪ್ರಜ್ಞಾವಂತರಲ್ಲ ಜೋಶಿ ಅವರ ಅಭಿಮಾನಿಗಳು. ಎಲ್ಲೂ ನಾನು ರಾಜಕೀಯಕ್ಕೆ ಬರ್ತೀನಿ ಅಂತಾ ಹೇಳಿಲ್ಲ. ನಾವು ಬರಬೇಕು ಎಂಬುದು ಜನರ ಅಭಿಪ್ರಾಯ. ನನ್ನ ಹಿಂದೆ ಬಿಜೆಪಿಯವರು ಇದ್ದಾರೆ,ಕಾಂಗ್ರೆಸ್ ನವರೂ ಇದ್ದಾರೆ ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆ ನೀಡಿದ್ದರು.

ಇದಕ್ಕೆ ಪ್ರತಿಯಾಗಿ ಹೇಳಿಕೆ ನೀಡಿದ್ದ ಪ್ರಹ್ಲಾದ್ ಜೋಶಿ, ಎಲ್ಲ ಷಡ್ಯಂತ್ರಗಳನ್ನು ಮೀರಿ, ನನಗೆ ಜನರ ಆಶೀರ್ವಾದವಿದೆ ಎಂದು ತಿರುಗೇಟು ನೀಡಿದ್ದರು. ಇದೀಗ ದಿಂಗಾಲೇಶ್ವರ ಶ್ರೀಗಳು ಧಾರವಾಡದ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲಲಿದ್ದಾರೆ.

ಹೆಣ್ಣಿಗೆ ಗೌರವ ಸಿಗೋದು ಒಂದು ಕನಸು ಅಷ್ಟೇ: ಅಶ್ವಿನಿ ಪರ ನಿಂತ ಆ್ಯಂಕರ್ ಅನುಶ್ರೀ..

ಬಸನಗೌಡ ಪಾಟೀಲ್ ಯತ್ನಾಳ್‌ಗೆ ಅಭಿವೃದ್ಧಿ ಬಗ್ಗೆ ಚರ್ಚೆಗೆ ಬರಲು ಸವಾಲ್ ಎಸೆದ ಸಚಿವ ಗುಂಡೂರಾವ್

ಬಾಲಾ ಬಿಚ್ಚಿದ್ರೆ ರಾಮ್‌ ನಾಮ್ ಸತ್ಯವೇ ಗತಿ: ಗೂಂಡಾ, ರೌಡಿಶೀಟರ್‌ಗಳಿಗೆ ಖಡಕ್ ವಾರ್ನಿಂಗ್ ನೀಡಿದ ಯೋಗಿ

- Advertisement -

Latest Posts

Don't Miss