Political News: ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮಂಡಿಸಿದ ಬಜೆಟ್ ಇದಲ್ಲ. ಬದಲಾಗಿ ದೇಶದ ಹಿತ, ಬಡವರ ಹಿತದೃಷ್ಟಿ ಹಾಗೂ ಅಭಿವೃದ್ಧಿಪರ ಬಜೆಟ್ ಆಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಬಜೆಟ್ ಮಂಡನೆ ಬಳಿಕ ಮಾತನಾಡಿರುವ ಸಚಿವರು, ದೇಶದ ಹಣಕಾಸಿನ ಭದ್ರತೆ ಜೊತೆಗೆ ಅಭಿವೃದ್ಧಿಪರವಾಗಿ ಇರುವಂಥ ಮಧ್ಯಂತರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದಾರೆ ಎಂದರು.
ಲೋಕಸಭೆ ಚುನಾವಣೆ ಪ್ರೇರಿತವಾಗಿ ಏನು ಬೇಕಾದರೂ ಮಾಡಬಹುದಾಗಿತ್ತು. ಆದರೆ, ಹಾಗೆ ಮಾಡದೆ ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ವಸತಿ, ಆರೋಗ್ಯ, ರಸ್ತೆ, ಸಾರಿಗೆ ಹೀಗೆ ಮೂಲ ಸೌಕರ್ಯಕ್ಕೆ ಒತ್ತು ಕೊಟ್ಟು ಮಂಡಿಸಿದಂತಹ ಮುಂಗಡ ಪಾತ್ರವಾಗಿದೆ ಎಂದು ಸಚಿವ ಜೋಶಿ ಸಮರ್ಥಿಸಿಕೊಂಡಿದ್ದಾರೆ.
ಈ ವಿಕಸಿತ ಭಾರತ ಬಜೆಟ್‌ನಲ್ಲಿ ಘೋಷಿಸಿದಂತೆ ರೈಲ್ವೆ ಕಾರಿಡಾರ್ ಕಾರ್ಯಕ್ರಮ ಕಲ್ಲಿದ್ದಲು ಸಚಿವಾಲಯದ ಫಸ್ಟ್ ಮೈಲ್ ಕನೆಕ್ಟಿವಿಟಿ ಯೋಜನೆಗಳಿಗೆ ಪೂರಕವಾಗಿದೆ.
ವಿತ್ತ ಸಚಿವರು ಕೃಷಿ, ಮೀನುಗಾರಿಕೆ, ಆರೋಗ್ಯ ಕ್ಷೇತ್ರಗಳಿಗೆ ಸಾಕಷ್ಟು ಒತ್ತು ಕೊಟ್ಟಿದ್ದಾರೆ. 11.11 ಲಕ್ಷ ಕೋಟಿ ರೂಪಾಯಿ ಮೂಲಭೂತ ಸೌಕರ್ಯಗಳಿಗೆ ಮೀಸಲಿಟ್ಟಿರುವುದು ಗಮನಾರ್ಹವಾಗಿದೆ ಎಂದಿದ್ದಾರೆ.
ರಾಷ್ಟ್ರೀಯ ಮಿಷನ್ ದಾಖಲೆ ಸಿದ್ಧ; ಕೇಂದ್ರ ಸರ್ಕಾರ 2030ರ ವೇಳೆಗೆ 100 ಮಿಲಿಯನ್ ಟನ್ ಕಲ್ಲಿದ್ದಲು ಅನಿಲೀಕರಣಕ್ಕಾಗಿ ರಾಷ್ಟ್ರೀಯ ಮಿಷನ್ ದಾಖಲೆ ಸಿದ್ಧಪಡಿಸಿದೆ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಖಾತೆ ನಿರ್ವಹಿಸುತ್ತಿರುವ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಸುಸ್ಥಿರ ಬಳಕೆಗಾಗಿ ಕಲ್ಲಿದ್ದಲಿನ ವೈವಿಧ್ಯೀಕರಣದತ್ತ ಸಾಗುತ್ತಿದ್ದೇವೆ. ಜಾಗತಿಕವಾಗಿ ಬೆಳೆಯುತ್ತಿರುವ ಪರಿಸರ ಕಾಳಜಿ ಮತ್ತು ಭಾರತ ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ವಿಸ್ತರಿಸುವ ಗುರಿಯೊಂದಿಗೆ ಹೆಜ್ಜೆ ಹಾಕಿದ್ದೇವೆ ಎಂದು ಪ್ರತಿಪಾದಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರ ದೂರದೃಷ್ಟಿ, ಪ್ರೋತ್ಸಾಹದ ಕಾರಣ ನಾವಿಂದು ಸ್ವಾವಲಂಬಿ ಭಾರತದತ್ತ ಸಾಗಿದ್ದೇವೆ ಎಂದು ಜೋಶಿ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
ಇಂದು ಶ್ರೀಮತಿ @nsitharaman ಅವರು ಮಾನ್ಯ ಪ್ರಧಾನಿ ಶ್ರೀ @narendramodi ಅವರ ಮಾರ್ಗದರ್ಶನದಲ್ಲಿ ಮಂಡಿಸಿದಂಥ ಬಜೆಟ್ ಅಭೂತಪೂರ್ವವಾಗಿದೆ. ಇದು ಮಧ್ಯಂತರ ಮುಂಗಡ ಪತ್ರವಾಗಿದ್ದು ಈ ಅವಧಿಯ ಕೊನೆಯ ಮುಂಗಡ ಪತ್ರವಿದು. ಮುಂಬರುವ ಚುನಾವಣೆಯ ದೃಷ್ಟಿಯಲ್ಲಿಟ್ಟುಕೊಳ್ಳದೆ ದೇಶದ ಹಿತ ಹಾಗೂ ಬಡವರ ಹಿತವನ್ನು ಗಮನದಲ್ಲಿಟ್ಟುಕೊಂಡು ಹಣಕಾಸಿನ ಭದ್ರತೆಯ… pic.twitter.com/r23YTI2MDt
— Pralhad Joshi (@JoshiPralhad) February 1, 2024
‘ಜ್ಞಾನ ವ್ಯಾಪಿ ಎಂಬ ಹೆಸರಿನ ಮಸೀದಿ ಎಲ್ಲಿಯೂ ಇಲ್ಲ. ಔರಂಗಜೇಬ್ ಒಡೆದ ದೇವಸ್ಥಾನ ಅದು.’
2024ರ ಕೇಂದ್ರ ಬಜೆಟ್‌ನಲ್ಲಿ ಲಕ್ಷದ್ವೀಪದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ
ತಮ್ಮ ಅಧಿಕಾರಾವಧಿಯ ಯೋಜನೆಗಳ ಸಾಧನೆ ವಿವರಿಸಿದ ಸಚಿವೆ ನಿರ್ಮಲಾ ಸೀತಾರಾಮನ್




