Hubballi News: ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಲೋಕಸಭಾ ಚುನಾವಣೆ ಕಾವು ರಂಗೇರುತ್ತಿದೆ. ಟಿಕೆಟ್‌ಗಾಗಿ ಸಾಕಷ್ಟು ಫೈಟ್ ನಡೆಯುತ್ತಿರುವ ಬೆನ್ನಲ್ಲೇ ಈಗ ಜಾತಿ ರಾಜಕಾರಣದ ಮುನ್ನೆಲೆಗೆ ಬಂದಿದೆ. ಜಾತಿ ಜನಾಂಗದ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಿಸಲು ಪ್ರಬಲ ಪೈಪೋಟಿ ನಡೆಯುತ್ತಿದೆ.
ಲೋಕಸಭಾ ಚುನಾವಣೆಗೆ ಇನ್ನೂ ಮೂರ್ನಾಲ್ಕು ತಿಂಗಳು ಬಾಕಿ ಇರುವಾಗಲೇ ಟಿಕೆಟ್‌ಗಾಗಿ ಒಳಗೊಂದಿದೊಳಗೆ ಬಿಗ್ ಫೈಟ್ ನಡೆಯುತ್ತಿದೆ. ಅಲ್ಲದೇ ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಟಿಕೆಟ್‌ಗೆ ಭಾರಿ ಡಿಮ್ಯಾಂಡ್ ಬಂದಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಕಂಡಿರುವ ಕಾಂಗ್ರೆಸ್ಸಿಗೆ ಟಿಕೆಟ್ ಪಡೆಯಲು ಕಸರತ್ತು ನಡೆಸಲಾಗುತ್ತಿದೆ.
ಲೋಕಸಭಾ ಚುನಾವಣೆಗೆ ಸಿದ್ದರಾದ ಅಲ್ಪಸಂಖ್ಯಾತರು
ರಾಜ್ಯದ ಮೂರು ಕ್ಷೇತ್ರಗಳ ಮೇಲೆ ಕಣ್ಣಿಟ್ಟಿರುವ ಅಲ್ಪಸಂಖ್ಯಾತರ ನಾಯಕರು ಹಾವೇರಿ ಕ್ಷೇತ್ರಕ್ಕೆ ಮುಸ್ಲಿಮರಿಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಕಲ್ಯಾಣ ಕರ್ನಾಟಕದಲ್ಲಿ ಬೀದರ್, ಕಿತ್ತೂರು ಕರ್ನಾಟಕದಲ್ಲಿ ಹಾವೇರಿ, ಬೆಂಗಳೂರು ಭಾಗದಲ್ಲಿ ಒಂದು ಟಿಕೆಟ್ ನೀಡಬೇಕೆಂದು ಅಲ್ಪಸಂಖ್ಯಾತರ ಒತ್ತಡ ಹಾಕಿದ್ದು,
ಜಾತಿ ಲೆಕ್ಕಾಚಾರದ ಆಧಾರ ಮೇಲೆ ಟಿಕೆಟ್ ನೀಡಬೇಕು ಎನ್ನುತ್ತಿದ್ದಾರೆ.
ಹಾವೇರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 7 ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಹಾವೇರಿ, ಹಾನಗಲ್, ಬ್ಯಾಡಗಿ, ರಾಣೇಬೆನ್ನೂರ, ಹಿರೇಕೆರೂರ, ಗದಗ, ಶಿರಹಟ್ಟಿ ವಿಧಾನಸಭಾ ಕ್ಷೇತ್ರಗಳು ಹಾವೇರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತವೆ. ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ 19 ಲಕ್ಷ ಮತದಾರರಿದ್ದಾರೆ. ಇದರಲ್ಲಿ ಲಿಂಗಾಯತ 7 ಲಕ್ಷ, ಅಲ್ಪಸಂಖ್ಯಾತ 4 ಲಕ್ಷ, ಕುರುಬ 4 ಲಕ್ಷ, ಸೇರಿದಂತೆ ಇತರೇ ಜಾತಿಯ ಮತದಾರರಿದ್ದಾರೆ.
1977 ರಿಂದ 2004 ರವರೆಗೆ ಈ ಕ್ಷೇತ್ರಕ್ಕೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡುತ್ತಾ ಬಂದಿರುವ ಕಾಂಗ್ರೆಸ್, 2008 ರಲ್ಲಿ ಕ್ಷೇತ್ರ ಪುನರವಿಂಗಡನೆ ಆದ 2009 ರಲ್ಲಿ ಲೋಕಸಭಾ ಚುನಾವಣೆ ಎದುರಾಯಿತು. 2009 ಮತ್ತು 2014 ರಲ್ಲಿ ಮುಸ್ಲಿಂ ಸಮುದಾಯದ ಸಲೀಂ ಅಹ್ಮದ್ ಕಾಂಗ್ರೆಸ್ ಅಭ್ಯರ್ಥಿಯಾದ್ರು. ಆದ್ರೆ ಎರಡೂ ಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಶಿ ಎದುರು ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಸೋಲು ಕಂಡರು.
ಒಟ್ಟಿನಲ್ಲಿ ಕಾಂಗ್ರೆಸ್ಸಿಗೆ ಟಿಕೆಟ್ ಹಂಚಿಕೆಯೇ ದೊಡ್ಡ ಸವಾಲಾಗಿದ್ದು, ಅಲ್ಪಸಂಖ್ಯಾತರ ಓಲೈಕೆ ಮಾಡುತ್ತದೆಯೋ ಅಥವಾ ಇನ್ನಿತರ ಸಮುದಾಯಗಳ ವಿಶ್ವಾಸಕ್ಕೆ ಮುಂದಾಗುತ್ತದೆಯೋ ಎಂಬುವುದು ಯಕ್ಷ ಪ್ರಶ್ನೆಯಾಗಿದ್ದು, ಗ್ಯಾರಂಟಿ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ನಿರ್ಧಾರವನ್ನು ಕಾದು ನೋಡಬೇಕಿದೆ.
‘ಪ್ರಧಾನಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ, ನೆರವು ನೀಡುತ್ತಾರೆಂದು ಭಾವಿಸಿದ್ದೇನೆ’
ಬಿಜೆಪಿಗೆ ನಾನೇ ಟಾರ್ಗೆಟ್ ಆಗ್ತಿದ್ದೇನೆ! ನನ್ನ ಬಗ್ಗೆ ಅವರಿಗೆ ಈಗ ಅರ್ಥವಾಗಿದೆ ಎಂದ ಶೆಟ್ಟರ್
‘ಬಿಜೆಪಿಯ ಪಕ್ಷದ MPಗಳನ್ನು ಮಾತ್ರ ಇಟ್ಟುಕೊಂಡು ಸಂಸತ್ ಅಧಿವೇಶನ ನಡೆಸುವುದು ನಾಚಿಕೆಗೇಡು’