Thursday, December 12, 2024

Latest Posts

ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

- Advertisement -

Dharwad News: ಧಾರವಾಡ: ಧಾರವಾಡದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ಧಾರವಾಡ ನಗರದ ಗಾಂಧಿ ನಗರ ಬಡಾವಣೆಯಲ್ಲಿನ ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ನಿವಾಸದ ಮೇಲೆ ದಾಳಿ ನಡೆದಿದೆ.

ಲೋಕಾಯುಕ್ತ ಡಿವೈಎಸ್ಪಿ ವೆಂಕನಗೌಡ ಪಾಟೀಲ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅಧಿಕಾರಿಗಳು ಆಸ್ತಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಇದರೊಂದಿಗೆ ಸವದತ್ತಿ ತಾಲೂಕಿನ ಹೂಲಿ ಮತ್ತು ಉಗರಗೋಳ ಗ್ರಾಮದ ಪಾರ್ಮಹೌಸ್ ಮೇಲೆ, ನರಗುಂದದ ಅಳಿಯನ ಮನೆಯ ಮೇಲೆ, ಗೋವಿಂದಪ್ಪ ಸೇರಿದಂತೆ ಆತನ ಸಹೋದರ ನಿವಾಸ ಸೇರಿ 5 ಕಡೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಮಹತ್ವದ ದಾಖಲೆಗಳನ್ನು ಲೋಕಾಯುಕ್ತ ಅಧಿಕಾರಿಗಳು ಪರಿಶೀಲಿಸಿದ್ದಾರೆ.

- Advertisement -

Latest Posts

Don't Miss