- Advertisement -
ನವದೆಹಲಿ: 17ನೇ ಲೋಕಸಭಾ ಚುನಾವಣೆಯ 7ನೇ ಹಾಗೂ ಕೊನೆಯ ಹಂತದ ಮತದಾನ ಇಂದು ಮುಕ್ತಾಯವಾಗಲಿದ್ದು, 7 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ ಒಟ್ಟು 59 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಶುರುವಾಗಿದೆ.
ಬಿಹಾರ, ಮಧ್ಯಪ್ರದೇಶ, ಪಂಜಾಬ್, ಪಶ್ಚಿಮ ಬಂಗಾಳ, ಜಾರ್ಖಂಡ್, ಉತ್ತರಪ್ರದೇಶ, ಹಿಮಾಚಲ ಪ್ರದೇಶ ಮತ್ತು ಕೇಂದ್ರಾಡಳಿತ ಪ್ರದೇಶ ಚಂಡೀಘರ್ ನಲ್ಲಿ ಮತದಾನ ನಡೆಯುತ್ತಿದೆ. ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೋರಖ್ ಪುರ್ ನಲ್ಲಿ ಯೋಗಿ ಆದಿತ್ಯನಾಥ್ ಸ್ಪರ್ಧೆಗಿಳಿದಿದ್ದಾರೆ.
ಸಂಜೆ 6 ಗಂಟೆವರೆಗೂ ಮತದಾನ ನಡೆಯಲಿದ್ದು ಮೇ 23ಕ್ಕೆ ಎಲ್ಲಾ ಅಭ್ಯರ್ಥಿಗಳ ಹಣೆಬರಹ ತಿಳಿಯಲಿದೆ.
- Advertisement -