Thursday, March 13, 2025

Latest Posts

ಚಿತ್ರದುರ್ಗ ಹೆದ್ದಾರಿಯಲ್ಲಿ ಲಾರಿ ಪಲ್ಟಿ, ನಾಲ್ವರ ದುರ್ಮರಣ ..!

- Advertisement -

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೈರ್ ಸ್ಫೋಟಗೊಂಡು ಲಾರಿ ಪಲ್ಟಿಯಾಗಿದ್ದು ನಾಲ್ವರು ಮೃತಪಟ್ಟ ಘಟನೆ ನಡೆದಿದೆ.

ಗದಗ ಜಿಲ್ಲೆ ಹುಯಿಲಗೋಳ್ ನಿಂದ ಬೆಂಗಳೂರಿಗೆ ಈರುಳ್ಳಿ ಸಾಗಣೆ ಮಾಡುತ್ತಿದ್ದ ಲಾರಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೈರ್ ಸ್ಫೋಟಗೊಂಡ ಕಾರಣ ಪಲ್ಟಿಯಾಗಿದ್ದು ನಾಲ್ವರು ಮೃತಪಟ್ಟಿದ್ದಾರೆ. ಗದಗ ಮೂಲದ ಹನುಮಪ್ಪ30, ಪ್ರಶಾಂತ28, ಗುರಪ್ಪ30, ರಮೇಶ 30 ಮೃತ ದುರ್ದೈವಿಗಳು. ಇನ್ನು ಘಟನೆ ವೇಳೆ ಲಾರಿ ಪಲ್ಟಿಯಾಗುತ್ತಿದ್ದಂತೆ ಹಿಂಬದಿ ಚಲಿಸುತ್ತಿದ್ದ ಒಂದು ಕಾರು, ಆರು ಲಾರಿ ಡಿಕ್ಕಿ ಹೊಡೆದುಕೊಂಡಿದೆ. ಸರಣಿ ಅಪಘಾತದಲ್ಲಿ 10 ಜನರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಿರಿಯೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಪಘಾತ ಸುದ್ದಿ ತಿಳಿಯುತ್ತಿದ್ದಂತೆ ಹುಯಿಲಗೋಳ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಮೃತರ ಕುಟುಂಬದಲ್ಲಿ ಅಕ್ರಂದನ ಮುಗಿಲು ಮುಟ್ಟಿದೆ.

- Advertisement -

Latest Posts

Don't Miss