ಕೃಷಿ ಕಾನೂನು ವಿರೋಧಿಸಿ ನಡೆಯುತ್ತಿರೋ ರೈತರ ಪ್ರತಿಭಟನೆಯಿಂದಾಗಿ ಸಾರಿಗೆ, ಉದ್ದಿಮೆ ಸೇರಿದಂತೆ ಕೊರೋನಾ ಮಾರ್ಗಸೂಚಿ ಪಾಲನೆ ಮೇಲೆ ದುಷ್ಪರಿಣಾಮ ಉಂಟಾಗಿದೆ ಅಂತ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ತಿಳಿಸಿದೆ.
ಅಲ್ಲದೆ ಈ ಸಂಬಂಧ ಅತ್ಯಧಿಕ ಪ್ರಮಾಣದಲ್ಲಿ ಪ್ರತಿಭಟನೆಗಳು ನಡೆದ ದೆಹಲಿ, ಉತ್ತರಪ್ರದೇಶ, ಹರಿಯಾಣ ಮತ್ತು ರಾಜಸ್ಥಾನ ರಾಜ್ಯಗಳ ಸರ್ಕಾರಕ್ಕೆ ನೋಟೀಸ್ ಕಳುಹಿಸಲಾಗಿದೆ.
ರೈತರು ಪ್ರತಿಭಟನೆಯನ್ನು ಮುಂದುವರೆಸಿದ್ದರಿಂದ ಉದ್ಯಮಿಗಳ ಮೇಲೆ ಸಾಕಷ್ಟು ದುಷ್ಪರಿಣಾಮವಾಗುತ್ತಿದೆ. ಪ್ರತಿಭಟನೆಯಿಂದಾಗಿ 9000 ಸಣ್ಣ, ಮಧ್ಯಮ ಮತ್ತು ದೊಡ್ಡ ಕಂಪನಿಗಳಿಗೆ ನಷ್ಟ ಸಂಭವಿಸಿದೆ ಅಂತ ಆಯೋಗ ಮಾಹಿತಿ ನೀಡಿದೆ.
ಅ.10 ರ ಒಳಗಾಗಿ ವರದಿ ಸಲ್ಲಿಸುವಂತೆ ಆರ್ಥಿಕ ಪ್ರಗತಿ ಸಂಸ್ಥೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ದೆಹಲಿ ವಿಶ್ವವಿದ್ಯಾಲಯದ ದೆಹಲಿ ಸ್ಕೂಲ್ ಆಫ್ ಸೋಷಿಯಲ್ ವರ್ಕ್ ಗೆ ಸೂಚನೆ ನೀಡಲಾಗಿದೆ ಎಂದು ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ.




