Friday, December 27, 2024

Latest Posts

ಕೆರೆಗೆ ಬಿದ್ದು ಪ್ರೇಮಿಗಳ ಆತ್ಮಹತ್ಯೆ!

- Advertisement -

ಈ ಫೋಟೋದಲ್ಲಿ ಕಾಣ್ತಿರೋ ಇವರಿಬ್ರು ಪ್ರೇಮಿಗಳು.. ಕಳೆದ ಕೆಲವು ವರ್ಷಗಳಿಂದ ನನಗೆ ನೀನು.. ನಿನಗೆ ನಾನು.. ಅಂತಾ ಪರಸ್ಪರ ಪ್ರೀತಿಸ್ತಿದ್ರು.. ಅದ್ಯಾವ ಮಟ್ಟಿಗೆ ಅಂದ್ರೆ, ಮದುವೆಯಾಗೋ ಕನಸು ಕಂಡಿದ್ರು.. ಆದ್ರೆ, ಯಾವಾಗ ನಮ್ಮಿಬ್ಬರ ಮದುವೆ ಅಸಾಧ್ಯವೆಂದು ಗೊತ್ತಾತ್ತೋ ಈ ಯುವ ಪ್ರೇಮಿಗಳು ಜವರಾಯನನ್ನು ಹುಡುಕಿಕೊಂಡು ಹೋಗಿದ್ದಾರೆ..

ಬಿ.ಕಾಂ ವ್ಯಾಸಾಂಗ ಮಾಡ್ತಿದ್ದ ಯುವಕ ಶ್ರೀಕಾಂತ್ (24) ಬೆಂಗಳೂರಿನ ಕೋಣನಕುಂಟೆ ನಿವಾಸಿಯಾಗಿದ್ದ. ವಿದ್ಯಾರ್ಥಿನಿ ಅಂಜನಾ(20) ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಇವರಿಬ್ರರ ಪ್ರೀತಿಗೆ ಪೋಷಕರ ವಿರೋಧವಿತ್ತು. ಜುಲೈ 1ರಂದು ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.
ಶ್ರೀಕಾಂತ್ ಹಾಗೂ ಅಂಜನಾ ಕೈಕೊಟ್ಟ ಹಗ್ಗ ಕಟ್ಟಿಕೊಂಡು ನೈಸ್ ರಸ್ತೆ ಬಳಿಯ ಅಂಜನಾಪುರದ ತುಳಸಿಪುರ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಕುತೂಹಲದ ಸಂಗತಿ ಎಂದರೆ, ಶ್ರೀಕಾಂತ್​ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿತ್ತು. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್​ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest Posts

Don't Miss