Sunday, December 22, 2024

Latest Posts

ಕೇಂದ್ರದಿಂದ ಕಡಿಮೆ ಬರಪರಿಹಾರ ಬಿಡುಗಡೆ: ಕಾಂಗ್ರೆಸ್ ಪ್ರತಿಭಟನೆ

- Advertisement -

Political News: ಕರ್ನಾಟಕಕ್ಕೆ ಬರಬೇಕಾದ ಬರಪರಿಹಾರದಲ್ಲೇ, ಕೆಲವೇ ಕೆಲವರಷ್ಟು ಮೊತ್ತದ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಕಾಂಗ್ರೆಸ್ ಸರ್ಕಾರ ಇಂದು ಪ್ರತಿಭಟನೆ ಹಮ್ಮಿಕೊಂಡಿತ್ತು. ಬೆಂಗಳೂರಿನ ವಿಧಾನಸೌಧದ ಎದುರು ಇರುವ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದು, ಸಿಎಂ, ಡಿಸಿಎಂ ಸೇರಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಈ ಬಾರಿ ಭೀಕರ ಬರಗಾಲದಿಂದಾಗಿ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿದೆ. ಪ್ರಧಾನಿ ನರೇಂದ್ರಮೋದಿ ಅವರಲ್ಲಿ 4,663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ, 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒಟ್ಟು 18,174 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೆವು. ನಿನ್ನೆ ಕೇಂದ್ರ ಬಿಜೆಪಿ ಸರ್ಕಾರವು ಕೇವಲ ರೂ.3,454 ಕೋಟಿ ಅಂದರೆ ನಮ್ಮ ಮನವಿಯ ನಾಲ್ಕನೇ ಒಂದು ಭಾಗಕ್ಕೂ ಕಡಿಮೆ ಬರಪರಿಹಾರ ಬಿಡುಗಡೆ ಮಾಡಿ ಮತ್ತೆ ನಾಡಿಗೆ ಅನ್ಯಾಯ ಮಾಡಿದ್ದು, ಈ ಅನ್ಯಾಯದ ವಿರುದ್ಧ ಇಂದು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಸಿಎಂ ಹೇಳಿದ್ದಾರೆ.

ಇನ್ನು ಡಿಸಿಎಂ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಬರಪರಿಹಾರ ಬಿಡುಗಡೆಯಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡಿರುವ ಮಹಾ ಮೋಸದ ವಿರುದ್ಧ ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ಸೂರ್ಜೆವಾಲಾ ಹಾಗೂ ಮುಖ್ಯಮಂತ್ರಿಗಳೊಂದಿಗೆ ಪಾಲ್ಗೊಂಡೆ. ಸೆಪ್ಟೆಂಬರ್‌ನಿಂದ ಇಲ್ಲಿಯವರೆಗೂ ಭೀಕರ ಬರದಿಂದಾಗಿ ₹18,172 ಕೋಟಿ ರೂಪಾಯಿ ನಷ್ಟವಾಗಿದೆ. ಆದರೆ ಕೇಂದ್ರ ಸರ್ಕಾರ ಕೇವಲ ₹3454 ಕೋಟಿ ರೂಪಾಯಿ ಬಿಡುಗಡೆ ಮಾಡುವ ಮೂಲಕ ಮತ್ತೆ ಮಲತಾಯಿ ಧೋರಣೆ ಅನುಸರಿಸಿದೆ. ನಾವು ಕೇಂದ್ರದ ಮುಂದೆ ಭಿಕ್ಷೆ ಕೇಳುತ್ತಿಲ್ಲ, ಕನ್ನಡಿಗರ ಹಕ್ಕನ್ನು ಕೇಳುತ್ತಿದ್ದೇವೆ. ಆದರೆ ಬರ ಪರಿಹಾರದ ವಿಷಯದಲ್ಲಿ ರೈತರ ಜೊತೆ ನಿಲ್ಲದೆ ರಾಜಕೀಯ ಮಾಡುತ್ತಿರುವ ಬಿಜೆಪಿ ನಾಯಕರು ಹಾಗೂ ಜೆಡಿಎಸ್‌ ನಾಯಕರು ನಿಜವಾದ ನಾಡದ್ರೋಹಿಗಳು. ಕಾಂಗ್ರೆಸ್‌ ಗ್ಯಾರಂಟಿಗಳು ಭೀಕರ ಬರ ಪರಿಸ್ಥಿತಿಯಲ್ಲಿ ಜನರ ಕೈ ಹಿಡಿದಿವೆ ಎಂಬುದನ್ನು ನೆನಪಿಟ್ಟುಕೊಳ್ಳಬೇಕು ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ.

ಮದುವೆ ಬಳಿಕವೂ ನಟನೆ ಮುಂದುವರಿಸುತ್ತೇನೆ: ನಟಿ ಮಾನ್ವಿತಾ ಕಾಮತ್

ಕೇಂದ್ರ ಸರ್ಕಾರ ಒಲ್ಲದ ಮನಸ್ಸಿನಿಂದ ಕರ್ನಾಟಕಕ್ಕೆ ಬರ ಪರಿಹಾರ ನೀಡಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ ಅಭ್ಯರ್ಥಿ ಇ ತುಕಾರಂ ಪರ ಮತಯಾಚನೆ: ಪ್ರಧಾನಿ ಮೋದಿ ವಿರುದ್ಧ ಟೀಕಾಪ್ರಹಾರ

- Advertisement -

Latest Posts

Don't Miss