ಕೇಂದ್ರ ಸುದ್ದಿ:ಕೇಂದ್ರದ ನರೇಂದ್ರ ಮೋದಿ ಸರ್ಕಾರ ಅಡುಗೆ ಅನಿಲ ಬೆಲೆಯನ್ನು 200 ರೂಪಾಯಿ ಕಡಿತ ಮಾಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ರಿಕಾ ಪ್ರಕಟಣೆ ಹೊರಡಿಸಿದರು.
ಕೊನೆಗೂ ನಮ್ಮ ಗ್ಯಾರಂಟಿ ಯೋಜನೆಗಳಿಂದ ಪ್ರೇರಣೆ ಪಡೆದು ಎಲ್.ಪಿ.ಜಿ ಸಿಲಿಂಡರ್ ಬೆಲೆಯನ್ನು ರೂ.200 ಕಡಿಮೆ ಮಾಡಿರುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯದ ಸಮಸ್ತ ಜನತೆಯ ಪರವಾಗಿ ಧನ್ಯವಾದಗಳು. ನಮ್ಮ ಜನಪರವಾದ ಯೋಜನೆಗಳಿಂದ ಪ್ರೇರಿತರಾಗಿ ಜಾರಿಗೆ ತರುವ ಎಲ್ಲ ಯೋಜನೆಗಳನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.
ಚುನಾವಣಾ ಪೂರ್ವದಲ್ಲಿ ನಮ್ಮ ಪಕ್ಷ ಪ್ರಣಾಳಿಕೆ ಮೂಲಕ ನೀಡಿದ ಭರವಸೆಗಳಲ್ಲಿ ಪ್ರಮುಖವಾದ ಐದು ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕನ್ನು ನೂರು ದಿನಗಳೊಳಗೆ ನಮ್ಮ ಸರ್ಕಾರ ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ನುಡಿದಂತೆ ನಡೆಯುವ ನಮ್ಮ ಬದ್ದತೆ ನಿಮಗೂ ಪ್ರೇರಣೆಯಾಗಲಿ, ಅದರಿಂದ ಜನರಿಗೆ ಒಳ್ಳೆಯದಾಗಲಿ ಎಂದು ಮನ:ಪೂರ್ವಕವಾಗಿ ಹಾರೈಸುತ್ತೇನೆ.
Barack obama; ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ದಂಪತಿ ಮಂಡ್ಯ ಭೇಟಿ..!
Kaveri: ಕಾವೇರಿ ವಿಚಾರ; ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿ:ಬಸವರಾಜ ಬೊಮ್ಮಾಯಿ