Madhya Pradesh: ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾ*ವು

Madhya Pradesh: ಮಧ್ಯಪ್ರದೇಶದ ಪ್ರಸಿದ್ಧ ದೇವಸ್ಥಾನ, 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ.

ಧಾರಾಕಾರ ಮಳೆಯಿಂದಾಗಿ ಉಜ್ಜಯಿನಿ ಮಹಾಕಾಲ ದೇವಸ್ಥಾನದ ಹೊರಭಾಗದ ಮಹಾಗಣೇಶ ಮಂದಿರದ ಗೋಡೆ ಕುಸಿದು, ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನು ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗೋಡೆ ಕುಸಿದ ಪರಿಣಾಮವಾಗಿ ಕೆಲವರು ಗೋಡೆಯಡಿ ಸಿಲುಕಿದ್ದರು. ಅದರಲ್ಲಿ ನಾಲ್ವರನ್ನು ಬದುಕಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಇನ್ನಿಬ್ಬರು ಮೃತಪಟ್ಟಿದ್ದಾರೆ. ಉಜ್ಜಯಿನಿಯಲ್ಲಿ ರಸ್ತೆ ಮುಳುಗುವ ರೀತಿ ಧಾರಾಕಾರ ಮಳೆ ಬರುತ್ತಿದ್ದು, ಪ್ರವಾಸಿಗರಿಗೆ ಎಚ್ಚರಿಕೆ ನೀಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

About The Author