Monday, April 14, 2025

Latest Posts

ರೈತರ ಹತ್ಯೆ ಖಂಡಿಸಿ ಮಹಾರಾಷ್ಟ್ರ ಬಂದ್..!

- Advertisement -

www.karnatakatv.net: ಮಹಾರಾಷ್ಟ್ರವನ್ನು ಲಖಿಂಪುರ್ ಖೇರಿಯಲ್ಲಿ ನಡೆದ ರೈತರ ಹತ್ಯೆಯನ್ನು ಖಂಡಿಸಿ ಬಂದ್ ಮಾಡಲಾಗಿದೆ.

ಮುಂಬೈ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವು ನಗರಗಳಿಗೆ ತೆರಳುವ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಬಸ್ ಗಳು ಇಲ್ಲದ ಕಾರಣ ಜನರು ರೈಲುಗಳ ಮುಕಾಂತರ ತೆರಳುತ್ತಿದ್ದಾರೆ. ಅನೇಕ ಅಂಗಡಿ ಮುಂಗಟ್ಟುಗಳು ಹಾಗೂ ವಾಣಿಜ್ಯ ಮಳಿಗೆಗಳು ಬಂದ್ ಆಗಿವೆ. ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಮುಂಬೈನಿಂದ ಇತರೆ ಸ್ಥಳಗಳಿಗೆ ಸಂಚರಿಸುತ್ತಿವೆ. ಕೆಲವೆಡೆ ಕಲ್ಲು ತೂರಾಟದ ಘಟನೆಗಳು ಕಂಡುಬಂದಿದ್ದು, ಮುಂಬೈ ಮಹಾನಗರ ಪಾಲಿಕೆಯು ಬಸ್ ಸೇವೆಯನ್ನು ಇಂದು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.

ಅ. 3 ರಂದು ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಎಂಟು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ ನಾಲ್ವರು ರೈತರಾಗಿದ್ದು, ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರನ್ನು ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ಓಡಿಸುತ್ತಿದ್ದ ವಾಹನಗಳನ್ನು ರೈತರ ಮೇಲೆ ಹರಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.

- Advertisement -

Latest Posts

Don't Miss