Friday, December 13, 2024

Latest Posts

ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್‌ಗೆ ಬಾಂಬೆ ಹೈಕೋರ್ಟ್‌ನಿಂದ ಜಾಮೀನು

- Advertisement -

ಮಹಾರಾಷ್ಟ್ರ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಹಾಗೂ ಎನ್‌ಸಿಪಿ ನಾಯಕ ಅನಿಲ್ ದೇಶಮುಖ್‌ಗೆ ಬಾಂಬೆ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೇಶಮುಖ್‌ ಅವರನ್ನು ಬಂಧಿಸಲಾಗಿತ್ತು. ವಿಶೇಷ ಸಿಬಿಐ ನ್ಯಾಯಾಲಯವು ಕಳೆದ ತಿಂಗಳು ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ದೇಶಮುಖ್ ಅವರು ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ದೇಶಮುಖ್ ಅವರು ವೈದ್ಯಕೀಯ ಆಧಾರದಲ್ಲಿ ಹಾಗೂ ಅರ್ಹತೆಯ ಆಧಾರದ ಮೇಲೆ ಜಾಮೀನು ಕೋರಿದ್ದರು. ಎನ್‌ಸಿಪಿ ನಾಯಕ ಕಳೆದ ವರ್ಷ ನವೆಂಬರ್‌ನಿಂದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ  ಬಂಧನಕ್ಕೊಳಗಾದ ನಂತರ ಜೈಲಿನಲ್ಲಿದ್ದಾರೆ. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರ್ಷದ ಏಪ್ರಿಲ್‌ನಲ್ಲಿ ಸಿಬಿಐ ಅವರನ್ನು ಮತ್ತೆ ಬಂಧಿಸಿತ್ತು.

ಮಾಂಡೌಸ್ ಚಂಡಮಾರುತ ಪರಿಣಾಮದಿಂದ ರಾಜ್ಯದ ಹಲವೆಡೆ ಭಾರೀ ಮಳೆ

ದೇಶಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಕಳೆದ ತಿಂಗಳು ಜಾಮೀನು ನೀಡಿತ್ತು. ಆದಾಗ್ಯೂ, ಸಿಬಿಐನ ವಿಶೇಷ ನ್ಯಾಯಾಲಯವು ದೇಶಮುಖ್ ಅವರ ವಿರುದ್ಧ ಪ್ರಾಥಮಿಕ ಸಾಕ್ಷ್ಯಾಧಾರಗಳಿವೆ ಎಂದು ತಿಳಿಸಿದ ಜಾಮೀನು ಅರ್ಜಿಯನ್ನು ತಿರಸ್ಕರಿಸಿತು. ನಂತರ ದೇಶಮುಖ್ ಅವರು ಹಲವಾರು ಕಾಯಿಲೆಗಳನ್ನು ಹೊಂದಿದ್ದಾರೆಂದು ವೈದ್ಯಕೀಯ ಕಾರಣಗಳಿಗಾಗಿ ಜಾಮೀನು ಕೋರಿದ್ದರು.ಐಪಿಎಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಮತ್ತು ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಸಚಿನ್ ವಾಝೆ ಅವರು ದೇಶಮುಖ್ ವಿರುದ್ಧ ಹಲವು ಆರೋಪಗಳನ್ನು ಹೊರಿಸಿದ್ದರು, ಅವರು ಮಹಾರಾಷ್ಟ್ರದ ಅಂದಿನ ಗೃಹ ಸಚಿವ ದೇಶ್‌ಮುಖ್ ಅವರು ಮುಂಬೈನ ರೆಸ್ಟೋರೆಂಟ್‌ಗಳು ಮತ್ತು ಬಾರ್‌ಗಳಿಂದ ತಿಂಗಳಿಗೆ 100 ಕೋಟಿ ರೂಪಾಯಿ ಸಂಗ್ರಹಿಸುವ ಗುರಿಯನ್ನು ನೀಡಿದ್ದರು ಎಂದು ಹೇಳಿದ್ದಾರೆ. ನಂತರ ಈ ಆರೋಪಗಳ ಬಗ್ಗೆ ಪ್ರಾಥಮಿಕ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಸಿಬಿಐಗೆ ಸೂಚಿಸಿತ್ತು.

72ನೇ ವರ್ಷದ ಹುಟ್ಟುಹಬ್ಬ ಸಂಭ್ರಮದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್, ಬಾಬಾ ಸಿನಿಮಾ ಮರು ಬಿಡುಗಡೆ

ದೆಹಲಿ ಏರ್ ಪೋರ್ಟ್ ಗೆ ದಿಢೀರ್ ಭೇಟಿ ನೀಡಿದ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ

 

- Advertisement -

Latest Posts

Don't Miss