ಬೆಳಗಾವಿ: ಕರವೇ ಕಾರ್ಯಕರ್ತರು ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರ ವಿರುದ್ಧ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸುಮಾರು 8 ರಿಂದ 12 ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಿನ್ನೆ ಬೆಳಗಾವಿ ಪ್ರವೇಶಕ್ಕೆ ಅವಕಾಶ ನೀಡದಿದ್ದಕ್ಕೆ ಕರವೇ ಆಕ್ರೋಶ ವ್ಯಕ್ತಪಡಿಸಿ, ಹಿರೇಬಾಗೇವಾಡಿ ಟೋಲ್ ಗೇಟ್ ಬಳಿ ಕಲ್ಲು ತೂರಾಟ ನಡೆಸಲಾಗಿತ್ತು. ಮಹಾರಾಷ್ಟ್ರದ ಲಾರಿಯ ಮೇಲೆ ಕಲ್ಲು ತೂರಿ ಗಾಜು ಪುಡಿ ಪುಡಿ ಮಾಡಲಾಗಿತ್ತು. ಕೆಲವು ವಾಹನಗಳ ನಂಬರ್ ಪ್ಲೇಟ್ ಕಿತ್ತು ಮಸಿ ಬಳಿದು, ಗುಂಪು ಕಟ್ಟಿಕೊಂಡು ಗಲಾಟೆ ಮಾಡಿದ ಆರೋಪದಡಿ ಹಿರೇಬಾಗೇವಾಡಿ ಪೊಲೀಸರು ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಂಡಿದ್ದಾರೆ.
ಬಿಜೆಪಿ ನಾಯಕರಿಗೆ ಟ್ವೀಟ್ ಮೂಲಕ ಕೆಪಿಸಿಸಿ ತಿರುಗೇಟು
ಚಳಿಗಾಲದಲ್ಲಿ ತಣ್ಣೀರು ಕುಡಿಯುತ್ತಿದ್ದೀರಾ..? ಆದರೆ ಇದು ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ..!