Maharashtra News: ಮಹಾರಾಷ್ಟ್ರ ಚುನಾವಣೆ ನಡೆದು, ಬಿಜೆಪಿ ಮೈತ್ರಿಕೂಟ ಗೆಲುವು ಸಾಧಿಸಿದೆ. ಸಿಎಂ ರೇಸ್‌ನಲ್ಲಿ ದೇವೇಂದ್ರ ಫಡ್ನವೀಸ್ ಮತ್ತು ಏಕನಾಥ್ ಶಿಂಧೆ ಇದ್ದು, ಯಾರು ಸಿಎಂ ಆಗ್ತಾರೆ ಅನ್ನೋ ಕುತೂಹಲ ಮನೆ ಮಾಡಿದೆ. ಆದ್ರೆ ಏಕನಾಥ್ ಶಿಂಧೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ನನಗೆ ಸಿಎಂ ಆಗಲೇಬೇಕು ಎಂಬ ಆಸೆ ಏನಿಲ್ಲ. ಪ್ರಧಾನಿ ಮೋದಿ ಮತ್ತು ಅಮಿತ್ ಷಾ ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ, ಅದಕ್ಕೆ ನಾನು ಬದ್ಧನಾಗಿರುತ್ತೇನೆ ಎಂದಿದ್ದರು.
ಆದರೆ ಇನ್ನುವರೆಗೂ ಬಿಜೆಪಿ ಹೈಕಮಾಂಡ್ ಸಿಎಂ ಯಾರು ಅಂತ ಹೇಳಲಿಲ್ಲ. ಆದರೆ ಬಿಜೆಪಿ ನಾಯಕ ಸುಧೀರ್ ಎಂಬುವರು ಮುಂದಿನ ಸಿಎಂ ದೇವೇಂದ್ರ ಫಡ್ನವೀಸ್ ಅಂತಲೇ ಹೇಳಿದ್ದಾರೆ. ಅಲ್ಲದೇ ಬಿಜೆಪಿ ನಿರ್ಧಾರದ ಬಗ್ಗೆ ಏಕನಾಥ್ ಶಿಂಧೆ ಕೋಪಗೊಂಡಿಲ್ಲ. ಏಕೆಂದರೆ ಶಿಂಧೆಯವರಿಗೆ ಮಹಾರಾಷ್ಟ್ರ ಸರ್ಕಾರದಲ್ಲಿ ಸಿಗಬೇಕಾದ ಸ್ಥಾನ ಸಿಗಲಿದೆ ಎಂದಿದ್ದಾರೆ.
ಈಗಾಗಲೇ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರಕ್ಕೆ ಡೇಟ್ ಫಿಕ್ಸ್ ಆಗಿದೆ. ಡಿಸೆಂಬರ್ 5ಕ್ಕೆ ಮುಂಬೈನಲ್ಲಿ ಪ್ರಮಾಣವಚನ ಸಮಾರಂಭವಿದ್ದು, ಈ ವೇಳೆ ಫಡ್ನವೀಸ್ ಸಿಎಂ ಸ್ಥಾನಕ್ಕೇರಲಿದ್ದಾರೆಂದು ಹೇಳಲಾಗಿದೆ. ಶಿವಸೇನೆ ಮತ್ತು ಎನ್‌ಸಿಪಿಯಿಂದ ತಲಾ ಒಬ್ಬರು ಉಪಮುಖ್ಯಮಂತ್ರಿ ಸ್ಥಾನಕ್ಕೇರಲಿದ್ದಾರೆ.