Thursday, April 25, 2024

Latest Posts

ಮಹಾರಾಷ್ಟ್ರ ಸಿಎಂ ಜೊತೆ ಯಡಿಯೂರಪ್ಪ ಚರ್ಚೆ ಮಾಡಿದ್ದೇನು..?

- Advertisement -

ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ತಂಡ ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರನ್ನು ಭೇಟಿಯಾಗಿ ರಾಜ್ಯದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ವಿವಿಧ ವಿಚಾರಗಳ ಬಗ್ಗೆ ಚರ್ಚಿಸಲಾಯ್ತು. ಈ ಸಂದರ್ಭದಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್, ಗೃಹ ಸಚಿವರಾದ ಬೊಮ್ಮಾಯಿ ಮತ್ತು ಮಹಾರಾಷ್ಟ್ರ ನೀರಾವರಿ ಸಚಿವರಾದ ಗಿರೀಶ್ ದತ್ತಾತ್ರೇಯ ಮಹಾಜನ್ ಹಾಗೂ ಇಂಧನ ಸಚಿವರಾದ ಚಂದ್ರಶೇಖರ್ ಕಿಶನ್ ರಾವ್ ರವರು ಉಪಸ್ಥಿತರಿದ್ದರು.

ಚರ್ಚೆಯ ಪ್ರಮುಖ ಅಂಶಗಳು

ಮಹದಾಯಿ ನದಿ ವಿವಾದ ನ್ಯಾಯಾಧಿಕರಣ ನೀರು ಹಂಚಿಕೆ
ಮಾಡಿ ನೀಡಿರುವ ಆದೇಶವನ್ನು ಗೆಜೆಟ್ ಅಧಿಸೂಚನೆ
ಹೊರಡಿಸಬೇಕಾಗಿದೆ. ಈ‌ ನಿಟ್ಟಿನಲ್ಲಿ ಕರ್ನಾಟಕ-ಮಹಾರಾಷ್ಟ್ರ-
ಗೋವಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ ಸಮಸ್ಯೆ
ಬಗೆಹರಿಸಿ ಶೀಘ್ರವೇ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ
ಕೇಂದ್ರಕ್ಕೆ ಮನವಿ ಮಾಡಲು‌ ನಿರ್ಧಾರ.

ಕೃಷ್ಣಾ ನ್ಯಾಯಾಧಿಕರಣ ನೀರು ಹಂಚಿಕೆಗೆ ಸಂಬಂಧಿಸಿದಂತೆ
ಕರ್ನಾಟಕ ‌ಮತ್ತು ಮಹಾರಾಷ್ಟ್ರ ಸುಪ್ರೀಂ ಕೋರ್ಟ್‌ನಲ್ಲಿ
ಜಂಟಿಯಾಗಿ ಅಫಿಡವಿಟ್ ಸಲ್ಲಿಸಿ ನೀರು ಹಂಚಿಕೆ
ಆದೇಶವನ್ನು ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ
ಸರ್ಕಾರಕ್ಕೆ ಮನವಿ ಮಾಡಲು ನಿರ್ಧಾರ.

ಉತ್ತರ ಕರ್ನಾಟಕದ ಪ್ರವಾಹ ಪರಿಸ್ಥಿತಿಯನ್ನು ತಡೆಗಟ್ಟುವ
ನಿಟ್ಟಿನಲ್ಲಿ ಮುಂಗಾರು ಪ್ರಾರಂಭವಾದ ಕೂಡಲೇ ಕೋಯ್ನಾ
ಜಲಾಶಯದಿಂದ ಹಂತ ಹಂತವಾಗಿ ನೀರು ಬಿಡುವಂತೆ
ಹಾಗೂ ಈ ಪ್ರಕ್ರಿಯೆಯ ಮೇಲ್ವಿಚಾರಣೆಗೆ ಉನ್ನತ ಮಟ್ಟದ
ಸಮನ್ವಯ ಸಮಿತಿಯನ್ನು ರಚಿಸಲು ಸಭೆಯಲ್ಲಿ ತೀರ್ಮಾನ.

ಮುಂಬಯಿ-ಬೆಂಗಳೂರು ಕೈಗಾರಿಕಾ ಕಾರಿಡಾರ್ ರಚನೆಗೆ
ಈಗಾಗಲೇ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಈ
ಯೋಜನೆಗೆ ಚಾಲನೆ ನೀಡುವ ಬಗ್ಗೆ ಉಭಯ ಸರ್ಕಾರಗಳು
ಜಂಟಿಯಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ನಿರ್ಧಾರ

ಕಳೆದ ಆಗಸ್ಟ್ ನಲ್ಲಿ ಮಹಾರಾಷ್ಟ್ರ ಹಾಗು ಕರ್ನಾಟಕದಲ್ಲಿ
ಉದ್ಬವಿಸಿದ ಪ್ರವಾಹ ಪರಿಸ್ಥಿತಿಯ ನಿರ್ವಹಣೆ ಹಾಗು
ಪರಿಹಾರ ಕಾರ್ಯಗಳಿಗೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿ
ಅನುದಾನ ಒದಗಿಸುವಂತೆಯು ಎರಡು ರಾಜ್ಯಗಳಿಂದ
ಜಂಟಿಯಾಗಿ ಮನವಿ ಸಲ್ಲಿಸಲು ತೀರ್ಮಾನ

- Advertisement -

Latest Posts

Don't Miss