ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಹಾವೇರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿಗೆ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಪರಿಶಿಷ್ಟ ಪಂಗಡದ ಸಮುದಾಯದವರಿಂದ ಅರ್ಜಿ ಆಹ್ವಾನಿಸಲಾಗಿದೆ.

ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸರಕು ಸಾಗಾಣಿಕೆ ವಾಹನ, ಮೈಕ್ರೋ ಕ್ರೆಡಿಟ್ ಯೋಜನೆ, ಭೂ ಒಡೆತನ ಹಾಗೂ ಗಂಗಾ ಕಲ್ಯಾಣ ಯೋಜನೆ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದು.

ಅರ್ಹ ಅಭ್ಯರ್ಥಿಗಳು ಜಾತಿ ಮತ್ತು ಆದಾಯ ಪ್ರಮಾಣಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ವೋಟರ್ ಐಡಿ, ಬ್ಯಾಂಕ್ ಪಾಸ್‍ಬುಕ್ ಪ್ರತಿ, ವಾಹನವಾಗಿದ್ದಲ್ಲಿ ಡ್ರೈವಿಂಗ್ ಲೈಸನ್ಸ್, ಗಂಗಾ ಕಲ್ಯಾಣ ಯೋಜನೆಗೆ ಜಮೀನಿನ ಪಹಣಿ ಮತ್ತು ಸಣ್ಣ , ಅತೀ ಸಣ್ಣ ಹಿಡುವಳಿದಾರರ ದೃಢೀಕರಣ ಪತ್ರಗಳೊಂದಿಗೆ ದಿನಾಂಕ 20-08-2022ರೊಳಗಾಗಿ ಕಳುಹಿಸುವಂತೆ ತಿಳಿಸಿದೆ.

ವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ 2022-23ನೇ ಸಾಲಿಗೆ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಡಾ.ಬಿ.ಆರ್.ಅಂಬೇಡ್ಕರ, ಕರ್ನಾಟಕ ಆದಿಜಾಂಬವ, ಕರ್ನಾಟಕ ತಾಂಡಾ, ಕರ್ನಾಟಕ ಭೋವಿ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಳ ವ್ಯಾಪ್ತಿಗೆ ಒಳಪಡುವ ಜನಾಂಗದವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ಯೋಜನೆ(ನೇರಸಾಲ), ಐ.ಎಸ್.ಬಿ. ಯೋಜನೆ(ಇ.ವಿ. ಮತ್ತು ಇತರೆ ದ್ವಿಚಕ್ರ ವಾಹನ ಖರೀದಿ, ಸರಕು ವಾಹನ ಖರೀದಿ ಹಾಗೂ ಇತರೆ ಚಟುವಟಿಕೆಗಳಿಗೆ ಬ್ಯಾಂಕುಗಳ ಸಹಯೋಗ ದೊಂದಿಗೆ),ಎಂ.ಸಿ.ಎಫ್. ಪ್ರೇರಣಾ ಯೋಜನೆ, ಗಂಗಾ ಕಲ್ಯಾಣಯೋಜನೆ ಮತ್ತು ಭೂ ಒಡೆತನ ಯೋಜನೆ ಸೌಲಭ್ಯಕ್ಕೆ ಅರ್ಹ ಅಭ್ಯರ್ಥಿಗಳು ದಿನಾಂಕ 20-08-2022ರೊಳಗಾಗಿ ವೆಬ್‍ಸೈಟ್ ಇಡಿಡಿoಡಿ! https://suvidha.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆಮೂಲಕ ಅರ್ಜಿ ಸಲ್ಲಿಸಬೇಕು.

ಮಂಡಳಿ ವಿವೇಚನಾ ಕೋಟಾ ಅಥವಾ ಸರ್ಕಾರದ ಸಾಂಸ್ಥಿಕ ಕೋಟಾದಡಿ ಸ್ವೀಕರಿಸುವ ಅರ್ಜಿಗಳನ್ನುಸಹ ಸುವಿಧಾ ಪೋರ್ಟ್ ಮೂಲಕವೇ ಸಲ್ಲಿಸಬೇಕು. ನಿಗಧಿತ ದಿನಾಂಕ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವೆಬ್‍ಸೈಟ್ https://kmvstdcl.karnataka.gov.in, ನಿಗಮದ ಜಿಲ್ಲಾ ಕಚೇರಿ, ದೂ.08375-234408 ಹಾಗೂ ಕಲ್ಯಾಣ ಮಿತ್ರ ಸಹಾಯವಾಣಿ 9482300400 ಸಂಪರ್ಕಿಸಲು ಕೋರಲಾಗಿದೆ.

About The Author