ಮಹೇಶ್ ಶೆಟ್ಟಿ ತಿಮರೋಡಿಗೆ ಬಂಧನದ ಭೀತಿ ಶುರುವಾಗಿದೆ. ಅಕ್ರಮ ಶಸ್ತ್ರಾಸ್ತ್ರ ಪ್ರಕರಣ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸ್ ಇಲಾಖೆಯು ವಿಚಾರಣೆಗೆ ಹಾಜರಾಗುವಂತೆ ಮೂರನೇ ನೋಟಿಸ್ ಜಾರಿ ಮಾಡಿದೆ. ತನಿಖಾ ತಂಡವು ಅವರ ಮನೆಯಲ್ಲಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ ಮಾಡಿತ್ತು. ಕಳೆದ ಹತ್ತು ದಿನಗಳಿಂದ ತಿಮರೋಡಿ ವಿಚಾರಣೆಗೆ ಹಾಜರಾಗುತ್ತಿರಲಿಲ್ಲ.
ಮಹೇಶ್ ಶೆಟ್ಟಿ ತಿಮರೋಡಿ ತಮ್ಮ ವಕೀಲರ ಮೂಲಕ ಮಂಗಳೂರು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಅವರು ಆದೇಶದ ನಿರೀಕ್ಷೆಯಲ್ಲಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿಗೆ ಪಬ್ಲಿಕ್ ಪ್ರಾಸಿಕ್ಯೂಟರ್ ಸೆ.27 ರಂದು ಆಕ್ಷೇಪಣೆ ಸಲ್ಲಿಸಲು ಸಮಯ ಕೇಳಿದ್ರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಆಕ್ಷೇಪಣೆ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಿದ್ದಾರೆ.
ಸದ್ಯ ಮಹೇಶ್ ಶೆಟ್ಟಿ ತಿಮರೋಡಿ ಆಕ್ಷೇಪಣೆಗೆ ಸಲ್ಲಿಕೆಗೆ ಮತ್ತಷ್ಟು ಕಾಲಾವಕಾಶ ಕೋರಿದ್ದಾರೆ. ಕಾಲಾವಕಾಶ ಕೋರಿದ್ದಕ್ಕೆ ಸೆಪ್ಟೆಂಬರ್ 30ಕ್ಕೆ ಮುಂದೂಡಿಸಿದ್ದಾರೆ. ಹಾಗಾಗಿ ಸೆಪ್ಟೆಂಬರ್ 30 ಕ್ಕೆ ತಿಮರೋಡಿ ಅವರ ಕೇಸ್ ಯಾವ ಹಂತಕ್ಕೆ ತಲುಪಲಿದೆ. ಯಾವೆಲ್ಲಾ ವಿಚಾರಣೆಗಳ ಬಳಿಕ ಏನು ತೀರ್ಪು ಬರಲಿದೆ ಅನ್ನೋದನ್ನ ಸದ್ಯ ಕಾದುನೋಡಬೇಕಿದೆ.
ವರದಿ : ಲಾವಣ್ಯ ಅನಿಗೋಳ