‘ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯರ ಗ್ಯಾರಂಟಿ’

Political News: ನಿನ್ನೆ ಮೈಸೂರಿನ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ, ಭಾಷಣ ಮಾಡುತ್ತಿದ್ದ ವೇಳೆ ಸಿಎಂ ಹಿಜಬ್ ನಿಷೇಧ ವಾಪಸ್‌ ಪಡೆದಿದ್ದೇನೆ ಎಂದು ಘೋಷಣೆ ಮಾಡಿದ್ದರು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ,  ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಅವರ ಗ್ಯಾರಂಟಿ ಎಂದು ಹೇಳಿದೆ.

ಶಾಲೆ – ಕಾಲೇಜುಗಳಲ್ಲಿ ಮಕ್ಕಳು ಸಮಾನತೆಯಿಂದ ಕೂಡಿರಬೇಕು ಎಂದೇ ಸಮವಸ್ತ್ರ ನೀತಿಯನ್ನು ಜಾರಿಗೊಳಿಸಲಾಗಿದೆ. ಇದನ್ನು ಸುಪ್ರೀಂ ಕೋರ್ಟ್ ಸಹ ಎತ್ತಿ ಹಿಡಿದಿದೆ. ಆದರೆ, ಶಾಲಾ ವಿದ್ಯಾರ್ಥಿಗಳ ಮನಸ್ಸಲ್ಲಿ ಸಮವಸ್ತ್ರ ವಿಚಾರವಾಗಿ ಬೇಧವನ್ನು ಹುಟ್ಟು ಹಾಕುತ್ತಿದ್ದಾರೆ ಮುಖ್ಯಮಂತ್ರಿಗಳು. ಪಿಎಫ್ಐ ಗೂಂಡಾಗಳು, ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ವೋಟ್ ಬ್ಯಾಂಕ್‌ಗಾಗಿ ಸಿದ್ದರಾಮಯ್ಯ ಅವರು ಸಂವಿಧಾನವನ್ನೇ ತಿದ್ದುಪಡಿ ಮಾಡಲು ಹೊರಟಿದ್ದಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ಟ್ವೀಟ್ ಮಾಡುವ ಮೂಲಕ ಟ್ವೀಟ್ ಮಾಡಿದ್ದಾರೆ.

ನಿನ್ನೆ ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಎಂ, ಬಟ್ಟೆ ಹಾಕೋದು, ಊಟ ಮಾಡೋದು ಅವರವರ ಇಷ್ಟ. ಅದನ್ನು ನಾನ್ಯಾಕೆ ಅಡ್ಡಿಪಡಿಸಲಿ..? ನಾನು ಧೋತಿ ಮತ್ತು ಜುಬ್ಬಾ ಹಾಕಿಕೊಳ್ಳುತ್ತೇನೆ. ಅದು ನನ್ನ ಇಷ್ಟ. ಇನ್ನೊಬ್ಬವ ಪ್ಯಾಂಟ್ ಶರ್ಟ್ ಹಾಕಿಕೊಳ್ಳುತ್ತಾನೆ. ಅದು ಅವನ ಇಷ್ಚ.ಅದರಲ್ಲಿ ತಪ್ಪೇನಿದೆ..? ಹಾಗಾಗಿ ಹಿಜಬ್ ನಿಷೇಧದ ಆದೇಶ ವಾಪಸ್‌ ತೆಗೆದುಕೊಳ್ಳಲು ಸೂಚಿಸಲಾಗಿದೆ. ಕಾಂಗ್ರೆಸ್ ಸರ್ಕಾರ, ಎಲ್ಲ ಬಡವರು, ಅಲ್ಪಸಂಖ್ಯಾತರು, ದಲಿತರಿಗೆ ನ್ಯಾಯ ನೀಡಲು ಶ್ರಮಿಸುತ್ತಿದೆ. ಈವಿಚಾರದಲ್ಲಿ ರಾಜಿಯೇ ಇಲ್ಲವೆಂದು ಸಿಎಂ ಹೇಳಿದ್ದರು.

ಅಲ್ಲದೇ, ಪ್ರಧಾನಿ ನರೇಂದ್ರ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ತಿಳಿಸಿದ್ದೇನೆ ಎಂದು ಟ್ವೀಟ್ ಕೂಡ ಮಾಡಿದ್ದರು.

ಸಚಿವರ ಪ್ರೈವೇಟ್ ಜೆಟ್‌ನಲ್ಲಿ ಸಿಎಂ ಪ್ರಯಾಣಿಸಿದ್ದಕ್ಕೆ ಬಿಜೆಪಿ ಅಸಮಾಧಾನ: ಸಿದ್ದು ತಿರುಗೇಟು

ಉಡುಪಿ ಕೃಷ್ಣಮಠಕ್ಕೆ ಭೇಟಿ ಕೊಟ್ಟ ನಟಿ ಸಾಯಿ ಪಲ್ಲವಿ

ರಾಜ್ಯದಲ್ಲಿ ಹಿಜಬ್ ನಿಷೇಧ ವಾಪಸ್: ಸಿಎಂ ಸಿದ್ದರಾಮಯ್ಯ ಘೋಷಣೆ

About The Author