ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಲಗೈ ಬಂಟ ಬರ್ಬರ ಹತ್ಯೆ

Kolar crime news: ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಲಗೈ ಬಂಟ, ದಲಿತ ಮುಖಂಡ ಕೌನ್ಸಿಲರ್ ಶ್ರೀನಿವಾಸ್ ಅವರನ್ನು ಹತ್ಯೆ ಮಾಡಲಾಗಿದೆ. ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ಮಾಡುತ್ತಿದ್ದ ಬಾರ್ ಕಾಮಗಾರಿ ವೀಕ್ಷಣೆ ಹೋಗಿದ್ದಾಗ ಆರು ಜನ ಅಪರಿಚಿತ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಎದೆ, ತಲೆ, ದೇಹದ ಮೈಮೇಲೆ ಗಂಭೀರ ಗಾಯಗೊಂಡಿದ್ದ ಅವರನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. … Continue reading ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಲಗೈ ಬಂಟ ಬರ್ಬರ ಹತ್ಯೆ