ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಯಾಗಲಿದೆ ಅಂತಾ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಹೇಳಿದ್ದಾರೆ.
ಮಾಲೂರು ತಾಲೂಕಿನ ಚಿಕ್ಕತಿರುಪತಿ ಬಳಿ ಆಸ್ಪತ್ರೆ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವ್ರು.. ಸಿಎಂ ಯಡಿಯೂರಪ್ಪ ಬಳಿ ಈ ವಿಚಾರವಾಗಿ ಮಾತನಾಡಿದ್ದೇವೆ. ಸಿಎಂ ಯಡಿಯೂರಪ್ಪ ಶೀಘ್ರದಲ್ಲೇ ಸಂಪುಟ ವಿಸ್ತರಣೆ ಹಾಗೂ ಪುನರ್ ರಚನೆ ಮಾಡ್ತೇವೆ ಎಂದಿದ್ದಾರೆ ಅಂತಾ ಹೇಳಿದ್ರು.