ಚಾಮರಾಜನಗರ: ರಾಜ್ಯದ ಇತಿಹಾಸ ಪ್ರಸಿದ್ಧ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರಿಗೆ ದರ್ಶನ ಸೇರಿದಂತೆ ಇಂದಿನಿಂದ ಎಲ್ಲಾ ಸೇವೆಗಳಿಗೂ ಅವಕಾಶ ಕಲ್ಪಿಸಲಾಗಿದೆ.
ಕೊರೋನಾ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರಿಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಇದೀಗ ತೆಗೆದುಹಾಕಲಾಗಿದೆ. ಆದ್ರೀಗ ರಾಜ್ಯದಲ್ಲಿ ಕೋವಿಡ್ ಸೋಂಕು ಕೊಂಚ ತಗ್ಗಿರುವ ಹಿನ್ನೆಲೆಯಲ್ಲಿ ಚಿನ್ನದ ರಥೋತ್ಸವ , ಮುಡಿ ಸೇವೆ, ಲಾಡು ಪ್ರಸಾದ ವಿತರಣೆ ಸೇರಿದಂತೆ ಬಹುತೇಕ ಎಲ್ಲಾ ಸೇವೆಗಳು ಲಭ್ಯವಿರಲಿದೆ.
ಇನ್ನು ದೇವಾಲಯದ ಒಳ ಭಾಗದಲ್ಲಿ ನಡೆಯುವ ದೈನದಿಂದ ಸೇವೆಗಳಾದ ರುದ್ರಾಭಿಷೇಕ, ಮಹಾ ಮಂಗಳಾರತಿ, ಹುಲಿವಾಹನ, ಬಸವ ವಾಹನ ಸೇವೆ, ಚಿನ್ನದ ರಾಥೋತ್ಸವ ಸೇವೆಗಳನ್ನು ನೆರವೇರಿಸಲು ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.
ಮುಂದಿನ ಆದೇಶದವರೆಗೆ ಜಾತ್ರಾ ಮಹೋತ್ಸವ, ತೆಪ್ಪೋತ್ಸವ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತ ಗೊಳಿಸಲಾಗಿದೆ ಅಂತ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಜಯ ವಿಭಾವಸ್ವಾಮಿ ತಿಳಿಸಿದ್ದಾರೆ.
ಪ್ರಸಾದ್, ಕರ್ನಾಟಕ ಟಿವಿ- ಚಾಮರಾಜನಗರ