Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತನಾಡಿದ್ದು, ಮಲ್ಲಿಕಾರ್ಜುನ ಖರ್ಗೆ ಟೀಕೆಗೆ ಅರ್ಥವೇ ಇಲ್ಲ ಎಂದಿದ್ದಾರೆ.
ಸಮುದ್ರದ ಆಳದಲ್ಲಿ ಮೋದಿ ನವಿಲುಗರಿ ನೆಟ್ಟರೆ ಚಿಗುರುತ್ತಾ ಅಂತಾ ಖರ್ಗೆ ಹೇಳಿಕೆ ಕೊಟ್ಟಿದ್ದರು. ಈ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ನಮ್ಮ ಧರ್ಮ ಸಂಸ್ಕೃತಿ ಪರಂಪರೆಯನ್ನು ಉಳಿಸುವ ಕೆಲಸವನ್ನು ಮೋದಿ ಮಾಡ್ತಿದ್ದಾರೆ. ಇಡೀ ದೇಶ ಆರಾಧನೆ ಮಾಡುವ ಪವಿತ್ರ ಸ್ಥಳಗಳನ್ನು ಅಭಿವೃದ್ಧಿ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿಯನ್ನು ಹೊಗಳಿದ್ದಾರೆ.
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಶೆಟ್ಟರ್, ಚುನಾವಣಾ ಫಲಿತಾಂಶದ ನಂತರ ಅದು ಗೊತ್ತಾಗುತ್ತೆ. ಯಾರು ಅಡ್ಡ ಮತದಾನ ಮಾಡಿದ್ದಾರೆ ಅನ್ನೋದು ತಿಳಿಯುತ್ತೆ. ಫಲಿತಾಂಶ ಬರೋವರೆಗೂ ಏನು ಹೇಳೋಕೆ ಆಗಲ್ಲ. ಕುದುರೆ ವ್ಯಾಪಾರವೊ ಏನೋ ನನಗೆ ಗೊತ್ತಿಲ್ಲ ಎಂದಿದ್ದಾರೆ.
ಕಳಸಾ ಬಂಡೂರಿ ಯೋಜನೆ ವಿಳಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಶೆಟ್ಟರ್, ಮನೋಹರ್ ಪರಿಕರ ಸಿಎಂ ಇದ್ದಾಗ ಯೋಜನೆ ಅನುಷ್ಠಾನಕ್ಕೆ ಪ್ರಯತ್ನಿಸಿದೆ. ಮನೋಹರ್ ಪರಿಕರ್ ಮನವೊಲಿಕೆ ಸಹ ಆಗಿತ್ತು. ಆದರೆ ಆ ವೇಳೆ ಗೋವಾ ಕಾಂಗ್ರೆಸ್ ನವರೇ ವಿರೋಧ ಮಾಡಿದರು. ಅಲ್ಲಿನ ಕಾಂಗ್ರೆಸ್ ನಾಯಕರಿಗೆ ತಿರುಗೋಕೆ ಕೊಡಿ ಅಂತ ಕರ್ನಾಟಕ ಕಾಂಗ್ರೆಸ್ ನಾಯಕರಿಗೂ ಹೇಳಿದ್ದೆ. ಕೆಲವರಿಂದಾಗಿ ಇದು ವಿಳಂಬವಾಗುತ್ತಿದ್ದು, ಅದನ್ನು ಸರಿ ಮಾಡೋ ಕೆಲಸ ಮಾಡ್ತೀವಿ ಎಂದಿದ್ದಾರೆ.
ಗೋವಾ ವಿದ್ಯುತ್ ಯೋಜನೆಗೆ ಅರಣ್ಯ ನಾಶ ವಿಚಾರದ ಬಗ್ಗೆ ಮಾತನಾಡಿದ ಶೆಟ್ಟರ್, ಇದೇ ಮಾಹಿತಿ ಇನ್ನೂ ಇಟ್ಟುಕೊಂಡು ನಾವು ಪೈಟ್ ಮಾಡಬೇಕಾಗುತ್ತದೆ. ವಿದ್ಯುತ್ ಯೋಜನೆಗೆ ಅನುಮತಿ ಕೊಡುವುದಾದ್ರೆ, ಮಹದಾಯಿ ಯೋಜನೆಗೆ ಅನುಮತಿ ಬೇಡಿಕೆ ಇಡುತ್ತೇವೆ. ಕೇಂದ್ರ ಸಚಿವ ನಿರ್ಮಲ ಸೀತಾರಾಮನ್ ಮತ್ತು ಜೈ ಶಂಕರ್ ಲೋಕಸಭೆಗೆ ಸ್ಪರ್ಧಿಸುವ ಸಾಧ್ಯತೆಗಳಿವೆ. ಅವರು ಸದ್ಯ ರಾಜ್ಯಸಭೆ ಸದಸ್ಯರಿಲ್ಲ. ಹೀಗಾಗಿ ಲೋಕಸಭೆಗೆ ಸ್ಪರ್ಧಿಸಬಹುದು. ಆದರೆ ಕರ್ನಾಟಕದಿಂದಲೇ ಸ್ಪರ್ಧಿಸುತ್ತಾರೆ ಅಂತ ಹೇಳೋಕೆ ಬರಲ್ಲ. ಬೇರೆ ರಾಜ್ಯದಿಂದಲೂ ಸ್ಪರ್ಧಿಸಬಹುದು ಎಂದು ಶೆಟ್ಟರ್ ಹೇಳಿದ್ದಾರೆ.
ಮೊನ್ನೆ ಖಾಸಗಿ ಹೋಟೆಲ್‌ನಲ್ಲಿ ಧಾರವಾಡ ಜಿಲ್ಲೆಯ ಬಿಜೆಪಿ ಮುಖಂಡರ ಸಭೆ ಬಗ್ಗೆ ಮಾತನಾಡಿದ ಶೆಟ್ಟರ್, ಕೆಲ ಮುಖಂಡರನ್ನ ಮರು ಸೇರ್ಪಡೆ ಕುರಿತು ಚರ್ಚೆ ಆಗಿದೆ. ನಾಳೆ ನಡೆಯುವ ಪಕ್ಷದ ಕಾರ್ಯಕ್ರಮದಲ್ಲಿ 90 ಕ್ಕೂ ಹೆಚ್ಚು ಕಾರ್ಯಕರ್ತರು ಸೇರ್ಪಡೆ ಆಗುತ್ತಾರೆ. ಎಲ್ಲಾ ವಿವಾದಕ್ಕೂ ನಾಳೆ ತೆರೆ ಬೀಳಲಿದೆ ಎಂದಿದ್ದಾರೆ.

