ಬೆಂಗಳೂರು: ಮಾಂಡೌಸ್ ಚಂಡಮಾರುತದಿಂದ ವಾಯುಭಾರ ಕುಸಿತವಾಗಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಚಂಡಮಾರುತದ ಪರಿಣಾಮ ಕರ್ನಾಟಕದಲ್ಲೂ ಹಲವೆಡೆ ಆಗುತ್ತಿದ್ದು, ಮಳೆ ನಿರಂತರವಾಗಿ ಬರುತ್ತಿದೆ. ಡಿ.16 ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಇಂದು ಮೋಡ ಕವಿದ ವಾತವರಣವಿದ್ದು, ಕಲವೆಡೆ ಜಿಟಿ ಜಿಟಿ ಮಳೆಯಾಗುತ್ತಿದೆ. ಇನ್ನು ಮಳೆಯಿಂದಾಗಿ ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
72ನೇ ವರ್ಷದ ಹುಟ್ಟುಹಬ್ಬ ಸಂಭ್ರಮದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್, ಬಾಬಾ ಸಿನಿಮಾ ಮರು ಬಿಡುಗಡೆ
ಡಿಸೆಂಬರ್ 12ರಂದು ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ದೆಹಲಿ ಏರ್ ಪೋರ್ಟ್ ಗೆ ದಿಢೀರ್ ಭೇಟಿ ನೀಡಿದ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ
ಕೋಲಾರ, ಚಿಂತಾಮಣಿ, ರಾಯಲ್ಪಾಡು, ಬೆಂಗಳೂರು, ಮಾಲೂರು, ಗೌರಿಬಿದನೂರು, ದೇವನಹಳ್ಳಿ, ಬೆಂಗಳೂರು ನಗರ, ಯಲಹಂಕ, ಹೆಸರಘಟ್ಟ, ದೊಡ್ಡಬಳ್ಳಾಪುರ, ಚಿತ್ರದುರ್ಗ, ಎಲೆಕ್ಟ್ರಾನಿಕ್ಸಿಟಿ, ಸಿರಾ, ತಿಪಟೂರು, ಕುಡತಿನಿ, ಹಿರಿಯೂರು, ಗುಬ್ಬಿ, ಬುಕ್ಕಪಟ್ಟಣ, ಮಾನ್ವಿ, ಶ್ರೀರಂಗಪಟ್ಟಣ, ದಾವಣಗೆರೆ, ಚನ್ನಗಿರಿ, ಹೊನ್ನಾಳಿ, ಶಿವಮೊಗ್ಗ, ಕುಣಿಗಲ್ನಲ್ಲಿ ಮಳೆಯಾಗಿದೆ. ಮಳೆ ಮುಂದುವರೆಯಲಿದ್ದು ಎಚ್ಚರಿಕೆಯಿಂದಿರಲು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.