ಮಂಡ್ಯ: ಇಲಾಖೆಯಲ್ಲಿ ವರ್ಗಾವಣೆ ದಂಧೆಗೆ ಕೈಹಾಕಿದ್ದಾರೆ ಅಂತ ಆರೋಪಿಸಿ ಬಿಜೆಪಿ ಕಾರ್ಯಕರ್ತರು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ವಿರುದ್ಧ ರಾಜ್ಯಪಾಲರಿಗೆ ಡಿಸಿ ಮೂಲಕ ದೂರು ನೀಡಿದ್ದಾರೆ.
ರಾಜ್ಯದಲ್ಲಿ ಬರ ಆವರಿಸಿ, ರೈತರು ಆತ್ಮಹತ್ಯೆ ದಾರಿ ಹಿಡಿದಿದ್ದು, ಇಂಥಹ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಸಚಿವ ಎಚ್.ಡಿ ರೇವಣ್ಣ ವರ್ಗಾವಣೆ ದಂಧೆ ನಡೆಸೋ ಮೂಲಕ ಅಧಿಕಾರ ದುರ್ಬಳಕೆ ಮಾಡಿಕೊಳ್ತಿದ್ದಾರೆ ಅಂತ ಆರೋಪಿಸಿ ಇಂದು ಮಂಡ್ಯ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ದೂರು ನೀಡಿದರು.
ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಗೆ ನೂರಾರು ಬಿಜೆಪಿ ಕಾರ್ಯಕರ್ತರು, ಕೈಯಲ್ಲಿ ನಿಂಬೆಹಣ್ಣು ಹಿಡಿದುಕೊಂಡು ಬರುವ ಮೂಲಕ ಆಗಮಿಸಿ ಸಚಿವ ರೇವಣ್ಣ ಕಾಳೆದಿದ್ದು ಕಂಡುಬಂತು. ಜಿಲ್ಲಾಧಿಕಾರಿಗೆ ನೀಡಿರುವ ದೂರಿನ ಪ್ರತಿಯಲ್ಲಿ ರಾಜ್ಯಪಾಲರು ಕೂಡಲೇ ರೇವಣ್ಣ ನಡೆಸುತ್ತಿರೋ ವರ್ಗಾವಣೆ ದಂಧೆಯನ್ನು ತಡೆಯಬೇಕು ಅಂತ ಕಾರ್ಯಕರ್ತರು ಮನವಿ ಮಾಡಿದ್ದಾರೆ.
ಅಣ್ತಮ್ಮನ ವಿರುದ್ಧ ಸಿಡಿದೆದ್ದ ಸಚಿವ..! ಮಿಸ್ ಮಾಡದೇ ಈ ವಿಡಿಯೋ ನೋಡಿ