Mandya News:
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕು ಕಚೇರಿ ಆವರಣದಲ್ಲಿಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು ಅರ್ಹ 150 ಫಲಾನುಭವಿಗಳಿಗೆ ಬಗರ್ ಹುಕ್ಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಣೆ ಮಾಡಿದರು.ನಂತರ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಬಗರ್ ಹುಕ್ಕುಂ ಸಾಗುವಳಿ ಹಕ್ಕು ಪತ್ರ ಕೋರಿ ಅರ್ಜಿ ಸಲ್ಲಿಸಿರುವ ಬಡ ಹಾಗೂ ರೈತ ಕುಟುಂಬಗಳ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಗುವುದು ಎಂದರು. ಅರಣ್ಯ ಇಲಾಖೆಗೆ ಸಂಬಂಧಿಸಿದಂತೆ ಎಲ್ಲಾ ತಾಲ್ಲೂಕುಗಳಲ್ಲಿ ತೊಂದರೆ ಇದೆ. ಈ ಯೋಜನೆಯಡಿ ಇರುವ ತೊಂದರೆಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹರಿಸಬಹುದಾದ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿ ರೈತರ ಪರವಾಗಿ ಕೆಲಸ ಮಾಡಲಾಗುವುದು ಎಂದರು.
ಸರ್ಕಾರಿ ಜಾಗದಲ್ಲಿ ಗೋಮಾಳ, ಸ್ಮಶಾನ ಸೇರಿದಂತೆ ವಿವಿಧ ಕೆಲಸಗಳಿಗೆ ಮೊದಲ ಆದ್ಯತೆ ಮೇಲೆ ಸ್ಥಳ ಮೀಸಲಿಡಲಾಗುವುದು ಎಂದರು. ಸುಮಾರು 19000 ಅರ್ಜಿಗಳು ಇದ್ದು, ಯಾವುದನ್ನು ಪುರಸ್ಕರಿಸಲು ಸಾಧ್ಯ ಅವುಗಳ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.ಶಾಸಕ ಸುರೇಶ್ ಗೌಡ,ಬಗರ್ ಹುಕುಂ ಸಮಿತಿ ಸದಸ್ಯ ನರಸಿಂಹ ಮೂರ್ತಿ, ಅನುರಾಧ , ತಹಶೀಲ್ದಾರ್ ವಿಜಿಯಣ್ಣ ಹಾಗೂ ಇತರೆ ಮುಖಂಡರು, ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಜ.15 ರಂದು ಯೋಗಾಥಾನ್ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಿ: ಡಾ: ಹೆಚ್.ಎನ್ ಗೋಪಾಲಕೃಷ್ಣ