ಮಂಡ್ಯ: ನಿಗದಿತ ಅವಧಿಯೊಳಗೆ ಗುರಿ ಸಾಧಿಸಲು ಸೂಚನೆ: ಜಿಲ್ಲಾಧಿಕಾರಿ ಎಸ್.ಅಶ್ವತಿ

Mandya News:

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಲ್ಲಿ ಇಲಾಖೆಗಳಿಗೆ ನಿಗದಿಪಡಿಸಿರುವ ಗುರಿಯನ್ನು ಸಾಧಿಸುವಂತೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ತಿಳಿಸಿದರು.ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ನಡೆದ  ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ, ಕೌಶಲ್ಯಾಭಿವೃದ್ದಿ, ರೇಷ್ಮೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಪ್ರಗತಿಯಲ್ಲಿರುವ ಕಾರ್ಯಗಳನ್ನು ಪೂರ್ಣಗೊಳಿಸಲು ಸೂಚಿಸಿದರು.ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕುರಿತು ವಿವಿಧ  ಇಲಾಖೆಗಳಿಂದ ಆಗಿರುವ ಅಭಿವೃದ್ದಿ ಕಾರ್ಯಗಳ ಬಗ್ಗೆ ಚರ್ಚಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಸಭೆಯಲ್ಲಿ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಆಸಿಫಾ, ಸೈಯದ್ ಮಹತಾಬ್,ಜಿ.ಪಂ.ಉಪಕಾರ್ಯದರ್ಶಿ ಸಂಜೀವಪ್ಪ,ಜಿಲ್ಲಾ ನಿರೂಪಣಾಧಿಕಾರಿ ಚೇತನ್ ಕುಮಾರ್, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ವೇಣುಗೋಪಾಲ್,ಲೀಡ್ ಬ್ಯಾಂಕ್ ನ ಮುಖ್ಯ ವ್ಯವಸ್ಥಾಪಕರಾದ ಎಂ.ಪಿ.ದೀಪಕ್,ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ.ಆರ್.ಅಶೋಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

“ರಾಜ್ಯ ಸರ್ಕಾರ ಭ್ರಷ್ಟಾಚಾರದ ಪಿತಾಮಹಾವಿದ್ದಂತೆ”- ಜೆಡಿಎಸ್ MLC ಶರವಣ

ಕ್ರೂಸರ್ ಅಪಘಾತದಿಂದ ಮೃತರಾದವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಮೋದಿ

ತುಮಕೂರು: ಕ್ರೂಸರ್ , ಲಾರಿ ನಡುವೆ ಭೀಕರ ಅಪಘಾತ: 9 ಸಾವು 14 ಜನರಿಗೆ ಗಂಭೀರ ಗಾಯ

About The Author