ಕೇಂದ್ರ ಸಚಿವ ಹೆಚ್ ಡಿಕೆ ಕುಮಾರಸ್ವಾಮಿ ತವರು ಜಿಲ್ಲೆಯಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಿದ್ದಾರೆ. ಆದರೆ, ಜನತಾ ದರ್ಶನ ಕಾರ್ಯಕ್ರಮಕ್ಕೆ ಜಿಲ್ಲೆಯ ಸರ್ಕಾರಿ ಅಧಿಕಾರಿಗಳು ಗೈರಾಗಿದ್ದು, ಹೆಚ್ಡಿ ಕುಮಾರಸ್ವಾಮಿ ಅವರಿಗೆ ಇರಿಸುಮುರಿಸಾಗಿದೆ.
ಅಧಿಕಾರಿಗಳ ಗೈರಿನಿಂದ ಸರ್ಕಾರದ ವಿರುದ್ಧ ಆಕ್ರೋಶಗೊಂಡ ಹೆಚ್ಡಿ ಕುಮಾರಸ್ವಾಮಿ, ಜನತಾ ದರ್ಶನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಜಿಲ್ಲಾಧಿಕಾರಿಗಳಿಗೆ ನಾನು ಮನವಿ ಮಾಡಿದ್ದೆ. ಆದರೆ, ಜನತಾ ದರ್ಶನ ಕಾರ್ಯಕ್ರಮ ಹಾಜರಾಗದಂತೆ ರಾಜ್ಯ ಸರ್ಕಾರ ಜಿಲ್ಲಾಡಳಿತಕ್ಕೆ ಸುತ್ತೋಲೆ ನೀಡಿದೆ. ಇದು ಸರ್ಕಾರದ ಸಣ್ಣತನ ತೋರಿಸುತ್ತದೆ ಎಂದು ಸಿಡಿಮಿಡಿಗೊಂಡರು. ಜನತಾ ದರ್ಶನ ವಿಚಾರದಲ್ಲಿ ರಾಜ್ಯ ಸರ್ಕಾರ ದ್ವೇಷದ ರಾಜಕೀಯ ಮಾಡುತ್ತಿದ್ಯಾ? ಅನ್ನೋದ್ರ ರಿಪೋರ್ಟ್ ಮೇಲಿನ ವಿಡಿಯೋದಲ್ಲಿದೆ.




