Mandya: ಆಸ್ತಿ ವಿಚಾರಕ್ಕಾಗಿ ದಾಯಾದಿಗಳ ನಡುವೆ ಮಾರಾಮಾರಿ: ಮೂವರಿಗೆ ಗಂಭೀರ ಗಾಯ

Mandya News: ಮಂಡ್ಯದಲ್ಲಿ ಆಸ್ತಿ ವಿಚಾರಕ್ಕಾಗಿ ದಾಯಾದಿಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಒಂದೇ ಕುಟುಂಬದ ಮೂವರ ತಲೆ, ಕಾಲು, ಕೈಗೆ ಗಂಭೀರ ಗಾಯಗಳಾಗಿದೆ.

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ನಾಟನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ.

ಪಿತ್ರಾಜಿತ ಆಸ್ತಿ, ರಸ್ತೆಗೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, ಉಗ್ರೇಗೌಡ, ವೇಣು, ನೂತನ್, ಪ್ರಕಾಶ್, ಸೋಮೇಶ್, ಸಹಚರರೆಲ್ಲ ಸೇರಿ, ಸೋಮೇಗೌಡ, ವಸಂತ್ ಕುಮಾರ್, ನಿಶಾಂತ್ ಕುಮಾರ್ ಮೇಲೆ ಹಲ್ಲೆ ಮಾಡಿದ್ದಾರೆಂದ ಆರೋಪ ಕೇಳಿಬಂದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದ್ದು, ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author