Mandya: ಸಿಗರೇಟ್ ವಿಷಯಕ್ಕೆ ಕಿರಿಕ್: ತಾರಕಕ್ಕೇರಿದ ಜಗಳ, ಓರ್ವ ಸಾ*ವು

Mandya: ಮಂಡ್ಯದಲ್‌ಲಿ ಎರಡು ಯುವಕರ ಗುಂಪುಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿದ್ದು, ಓರ್ವನನ್ನು ಹತ್ಯೆ ಮಾಡಲಾಗಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ.

ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಪಟೇಲ್ ಸಾಮಿಲ್ ಬಳಿ ಘಟನೆ ನಡೆದಿದ್ದು, ಮರಳಿಗ ಗ್ರಾಮದ ಯಶ್ವಂತ್ ಅಲಿಯಾಸ್ ಕಜ್ಜಿ ಅಭಿಗೆ ತೀವ್ರ ಗಾಯವಾಗಿದ್ದು ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಗೊರವನಹಳ್ಳಿ ಗ್ರಾಮದ ದರ್ಶನ್ , ಸಚಿನ್ ಗೆ ಗಂಭೀರ ಗಾಯವಾಗಿದೆ. ಸಿಗರೆಟ್ ವಿಚಾರವಾಗಿ ಈ ಗಲಾಟೆ ನಡೆದಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ.

ಗಂಭೀರ ಗಾಯಗೊಂಡ ಇಬ್ಬರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು,
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಎಸ್ಪಿ ಡಾ.ವಿಜೆ ಶೋಭಾರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮದ್ದೂರು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ..

About The Author