Mandya News:
ಮಂಡ್ಯ :- ಆರ್ಎಸ್ಎಸ್, ಬಿಜೆಪಿ ಮುಖಂಡ ಹನಿಟ್ರ್ಯಾಪ್ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದ್ದು, 50 ಲಕ್ಷ ಹಣವನ್ನು ಸುಲಿಗೆ ಮಾಡಿ ದ್ದಾರೆ. ಎಂದು ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಮುಖಂಡ, ಧಾರ್ಮಿಕ ಪರಿಷತ್ ಸದಸ್ಯ, ಶ್ರೀನಿಧಿ ಗೊಲ್ಡ್ ಮಾಲೀಕ ಜಗನ್ನಾಥ ಶೆಟ್ಟಿ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಗೆ ಕಳೆದ ತಿಂಗಳು ದೂರು ನೀಡಿದ್ದರು.
ದಕ್ಷಿಣ ಕನ್ನಡ ಮೂಲದ ಜಗನ್ನಾಥ ಶೆಟ್ಟಿ ಮೈಸೂರಿನ ದರ್ಶನ್ ಲಾಡ್ಜ್ನಲ್ಲಿ ಯುವತಿ ಜತೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಚಿನ್ನಾಭಾರಣ ವ್ಯಾಪರಿಯಾದ ಇವರು ಬಿಜೆಪಿ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಇತ್ತೀಚಿಗೆ ಜಗನ್ನಾಥ್ ಶೆಟ್ಟಿ ನಾಲ್ವರ ವಿರುದ್ಧ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಹನಿಟ್ರ್ಯಾಪ್ ಕೇಸ್ ದಾಖಲಿಸಿದ್ದರು. ಈ ಎಫ್ಐಆರ್ ನಲ್ಲಿರುವ ಅಂಶಕ್ಕೂ, ವೈರಲ್ ಆಗಿರುವ ವಿಡಿಯೋಗೂ ಭಾರೀ ವತ್ಯಾಸವಿದೆ.ನಾನು ಪ್ರಾಧ್ಯಾಪಕ ಎಂದು ವಿದ್ಯಾರ್ಥಿನಿಗೆ ಪುಸಲಾಯಿಸಿದ್ದ ಚಿನ್ನದ ವ್ಯಾಪಾರಿ ಜಗನ್ನಾಥ್ ಶೆಟ್ಟಿ ಮೈಸೂರಿನ ಲಾಡ್ಜ್ ಗೆ ವಿದ್ಯಾರ್ಥಿನಿ ಕರೆಸಿಕೊಂಡಿದ್ದಾಗ ಆರೋಪಿ ಸಲ್ಮಾಭಾನು ಮತ್ತು ಟೀಂ ಗೆ ಸಿಕ್ಕಿಬಿದ್ದಿದ್ದಾನೆ. ಯುವತಿಯನ್ನು ಜಗನಾಥ್ ಶೆಟ್ಟಿ ಲಾಡ್ಜ್ ಗೆ ಕರೆಸಿ ಕೊಂಡಿರುವ ವೇಳೆಯಲ್ಲಿ ಪಂಚೆ, ಬನಿಯನ್ ನಲ್ಲಿದ್ದ ಜಗನ್ನಾಥ್ ಶೆಟ್ಟಿ ಗೆ ಆರೋಪಿ ಮತ್ತು ತಂಡ ಅವಾಚ್ಯ ಶಬ್ದಗಳಿಂದ ನಿಂದಿಸಿ ಎಳೆದಾಡಿ ಹೆದರಿಸಿರುವ ವೀಡಿಯೋ ಈಗ ವೈರಲ್ ಆಗಿದೆ. ಈ ವೇಳೆ ತನ್ನದು ತಪ್ಪಾಯ್ತು ತಪ್ಪಾಯ್ತು ಬಿಟ್ಟು ಬಿಡಿ ಎಂದು ಜಗನ್ನಾಥ್ ಶೆಟ್ಟಿ ಆರೋಪಿಗಳ ಕಾಲಿಗೆ ಬೀಳುತ್ತಿರುವ ವಿಡಿಯೋ ಈಗ ವೈರಲ್ ಆಗಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ತನಿಖೆ ನಡೆಸುತ್ತಿರುವ ಪೋಲೀಸರ ಪೂರ್ಣ ತನಿಖೆಯಿಂದ ಸತ್ಯಾಂಶ ಹೊರ ಬರಬೇಕಿದೆ.