Friday, December 27, 2024

Latest Posts

ಮಂಡ್ಯ: ಜ.25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ

- Advertisement -

Mandya News:

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಜನವರಿ 25 ರಂದು ಮಧ್ಯಾಹ್ನ 1 ಗಂಟೆಗೆ ಕಲಾಮಂದಿರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಮಂಡ್ಯ ‌ ಉಪವಿಭಾಗಾಧಿಕಾರಿ ಹೆಚ್.ಎಸ್ ಕೀರ್ತನ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿಂದು ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಈ ವರ್ಷ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಇರುವುದರಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಯುವ ಮತದಾರರರಿಗೆ ಮತದಾನದ ಮಹತ್ವದ ಬಗ್ಗೆ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳುವ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಮತದಾನಕ್ಕಿಂತ ಇನ್ನೊಂದಿಲ್ಲ. ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಧ್ಯೇಯವಾಕ್ಯದಲ್ಲಿ ಈ ಬಾರಿಯ ರಾಷ್ಟ್ರೀಯ ಮತದಾರರ ದಿನಾಚರಣೆ ನಡೆಯಲಿದೆ. ಮತದಾರರ ದಿನಾಚರಣೆ ಪ್ರಯುಕ್ತ ಬೆಳಿಗ್ಗೆ 11:30ಕ್ಕೆ ಜಿಲ್ಲಾಧಿಕಾರಿಗಳ ಕಛೇರಿಯಿಂದ ಕಲಾಮಂದಿರದವರೆಗೆ ಜಾಥಾ ಕಾರ್ಯಕ್ರಮ ನಡೆಯಲಿದೆ. ಜಾಥದಲ್ಲಿ ಹೆಚ್ಚಾಗಿ ಯುವ ಮತದಾರರು ಹಾಗೂ ಯುವ ಮತದಾರರಿಗೆ ಪ್ರೇರಣೆ ನೀಡಲು ಶತಾಯುಷಿ ಮತದಾರರು ಪಾಲ್ಗೊಳ್ಳುವ ವ್ಯವಸ್ಥೆ ಮಾಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಜನವರಿ 25 ರಂದು ಬೆಳಿಗ್ಗೆ 9:30 ಕ್ಕೆ ಕಲಾಮಂದಿರದಲ್ಲಿ ಮತದಾನ ಜಾಗೃತಿ ಕುರಿತಂತೆ ರಂಗೋಲಿ ಸ್ಪರ್ಧೆ ಆಯೋಜಿಸಿ, ಸ್ಥಳದಲ್ಲೇ ನೊಂದಣಿ ಮಾಡಿಕೊಂಡು ಸ್ಪರ್ಧೆಯಲ್ಲಿ ಪಾಲ್ಗೊಂಡು ಸೂಕ್ತ ಬಹುಮಾನ ಪಡೆಯಿರಿ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಂಜೀವಪ್ಪ, ತಹಶೀಲ್ದಾರ್ ಕುಞ಼ ಅಹಮ್ಮದ್, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಶ್ರೀನಿವಾಸ್, ಡಿಡಿಪಿಯು ಉಮೇಶ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವೇಣುಗೋಪಾಲ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಹಾಸನ: ಜಿಲ್ಲಾ ಕಾರಾಗೃಹದಲ್ಲಿ ಗಾಂಜಾ ಪ್ಯಾಕೇಟ್..ಮೊಬೈಲ್..ಹೆಡ್ ಫೋನ್..!?

ಉತ್ತರ ಕರ್ನಾಟಕ ಜನರ ಅಭಿವೃದ್ಧಿಗೆ ಬದ್ಧ- ಪ್ರಧಾನಿ ಮೋದಿ

‘ಜ.21 ರಿಂದ ವಿಜಯ ಸಂಕಲ್ಪ ಅಭಿಯಾನ’.

- Advertisement -

Latest Posts

Don't Miss