ಮಂಡ್ಯ: ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ನಡೆದಿದ್ದು, ನಗರದ ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಜಿಲ್ಲಾ ಆಡಳಿತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ ಇಲಾಖೆ, ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜು ಮಂಡ್ಯ ಇವರ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿತ್ತು. 120 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗಿದ್ದವು. 8೦೦೦ ಸಾವಿರ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ನೋಂದಣಿ ಮಾಡಿಕೊಂಡಿದ್ದರೆ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ತುಂಬಾ ಅನುಕೂಲಕರ ಎಂದು ಮಂಡ್ಯ ಜಿಲ್ಲಾ ಸಚಿವರಾದ ಗೋಪಾಲಯ್ಯ ಅವರು ತಿಳಿಸಿದರು.
ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ಹಬ್ಬದ ದಿನ, ವಿಶೇಷ ಸಂದರ್ಭದಲ್ಲಿ ವಿಶೇಷ ಭೋಜನ : ಶಿಕ್ಷಣ ಇಲಾಖೆ ಸುತ್ತೋಲೆ
ಕಾರ್ಯಕ್ರಮದಲ್ಲಿ ಶಾಸಕ ಎಂ.ಶ್ರೀನಿವಾಸ್, ಪಿ.ಇ.ಎಸ್ ವಿದ್ಯಾಸಂಸ್ಥೆ ಅಧ್ಯಕ್ಷ ಪಿ.ವಿಜಯಾನಂದ, ಜಿ.ಪಂ.ಸಿ.ಇ.ಒ.ಶಾಂತ ಎಲ್ ಹುಲ್ಮನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್ ಜನತಾ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಶಿವಪ್ರಸಾದ್, ಮಂಡ್ಯ ವಿಶ್ವವಿದ್ಯಾಲಯದ ಕುಲಸಚಿವ ನಾಗರಾಜ್, ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಮಹಲಿಂಗೇಗೌಡ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಸಕಲೇಶಪುರ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದ ಇಬ್ಬರ ಗಡಿಪಾರು : ಉಪ ಪೊಲೀಸ್ ಅಧೀಕ್ಷಕ ಹೆಚ್ಎನ್ ಮಿಥುನ್ ಆದೇಶ